ಮೋದಿಜಿ ಬಾಲಿವುಡ್ ನಲ್ಲಿರುತ್ತಿದ್ದರೆ, ಎಲ್ಲ ಪ್ರಶಸ್ತಿ ಅವರೇ ಗೆಲ್ಲುತ್ತಿದ್ದರು | ಅಸಾದುದ್ದೀನ್ ಓವೈಸಿ ವ್ಯಂಗ್ಯ - Mahanayaka
1:12 AM Wednesday 11 - December 2024

ಮೋದಿಜಿ ಬಾಲಿವುಡ್ ನಲ್ಲಿರುತ್ತಿದ್ದರೆ, ಎಲ್ಲ ಪ್ರಶಸ್ತಿ ಅವರೇ ಗೆಲ್ಲುತ್ತಿದ್ದರು | ಅಸಾದುದ್ದೀನ್ ಓವೈಸಿ ವ್ಯಂಗ್ಯ

owisi modiji
22/11/2021

ಲಕ್ನೋ: ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಂತೆಯೇ ಸಿಎಎ—ಎನ್ ಆರ್ ಸಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದರು.

ಬಾರಾಬಂಕಿಯಲ್ಲಿ ಭಾನುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಪ್ರಧಾನಿ ಮೋದಿ ಮತ್ತು ಬಹುತೇಕ ಎಲ್ಲಾ ಬಿಜೆಪಿ ನಾಯಕರು ಚಳುವಳಿಗಾರರನ್ನು ದೇಶದ್ರೋಹಿಗಳು, ಭಯೋತ್ಪಾದಕರು ಎಂದು ಕರೆದಿದ್ದಾರೆ. ಆದರೆ, ಉತ್ತರ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ, ಪ್ರಧಾನಿ ರೈತರಿಂದ ಕ್ಷಮೆಯಾಚಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಇವರು ರಾಜಕೀಯದಲ್ಲಿರುವ ಬದಲು ರಂಗಭೂಮಿಯಲ್ಲಿರಬೇಕಿತ್ತು. ಪ್ರಧಾನಿ ಮೋದಿ ಬಾಲಿವುಡ್ ನಲ್ಲಿರುತ್ತಿದ್ದರೆ, ಅವರೇ ಎಲ್ಲ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು ಎಂದು ಓವೈಸಿ ಇದೇ ವೇಳೆ ವ್ಯಂಗ್ಯವಾಡಿದ ಅವರು, ರೈತರ ಆಂದೋಲನವು ಪ್ರಧಾನಿ ಮೋದಿಯವರ ಪ್ರತಿಷ್ಠೆಗೆ ದೊಡ್ಡ ಹೊಡೆತ ನೀಡಿದ್ದು, ಮುಂಬರುವ ಚುನಾವಣೆಯಲ್ಲಿ ಅದರಿಂದಾಗುವ ಹಾನಿಯನ್ನು ಅವರು ಅರಿತುಕೊಂಡಿದ್ದಾರೆ ಹಾಗಾಗಿ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ಓವೈಸಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಾಕತ್ ಇದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿಸಿ ಹೊಡೆಯಿರಿ: ಸುಲಫಲ ಮಠದ ಸ್ವಾಮೀಜಿಗೆ ಸಿದ್ದಲಿಂಗ ಸ್ವಾಮೀಜಿ ತಿರುಗೇಟು

ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಿಸುತ್ತಲೇ ನೀರುಪಾಲಾದ ಪೊಲೀಸ್ ಅಧಿಕಾರಿ ಸಾವು

ದೈಹಿಕ ಸಂಬಂಧ ಬೆಳೆಸಿದ ಬಳಿಕ ಜಾತಕ ಸರಿ ಹೊಂದುವುದಿಲ್ಲ ಎಂದು ಮದುವೆಗೆ ನಿರಾಕರಣೆ: ಯುವಕನ ವಿರುದ್ಧ ದೂರು

ಮಂಗಳೂರು: ಬಾಲಕಿಯನ್ನು ಕೊಂದು ಚರಂಡಿಗೆಸೆದ ಪಾಪಿಗಳು!

ಆಡು ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಅಧಿಕಾರಿಯನ್ನು ಕೊಚ್ಚಿ ಹಾಕಿದ ಕಳ್ಳರ ಗ್ಯಾಂಗ್

ಹಿಂದೂ ಯುವತಿ, ಮುಸ್ಲಿಮ್ ಯುವಕನ ವಿವಾಹ ಫಿಕ್ಸ್: ಸ್ವಾಮೀಜಿಯಿಂದ ಸಂಧಾನಕ್ಕೆ ಯತ್ನ

ಇತ್ತೀಚಿನ ಸುದ್ದಿ