ಕರ್ನಾಟಕದಾದ್ಯಂತ ದೊರೆತ ಭಾರೀ ಬೆಂಬಲಕ್ಕೆ ಮನತುಂಬಿ ಪತ್ರ ಬರೆದ ನಾದ ಬ್ರಹ್ಮ ಹಂಸಲೇಖ
ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಅಸ್ಪೃಶ್ಯತೆ ವಿರೋಧಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂಪ್ರದಾಯವಾದಿಗಳು ಎಬ್ಬಿಸಿರುವ ವಿವಾದದ ನಡುವೆಯೇ ರಾಜ್ಯದಲ್ಲಿ ಹಂಸಲೇಖ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಹಂಸಲೇಖ ಅವರು ಪತ್ರವೊಂದನ್ನು ಬರೆದಿದ್ದಾರೆ.
ಪೂಜ್ಯ ಕರ್ನಾಟಕವೇ
ನಮಸ್ಕಾರ,
ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆ ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ. ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.
ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.
ಅಭಿಮಾನ ಆವೇಶವಾಗಬಾರದು: ಆವೇಶ ಅವಗಢಗಳಿಗೆ ಕಾರಣವಾಗಬಾರದು! ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ, ಮುಟ್ಟಿಸುತ್ತದೆ.
ನಿಮ್ಮ ಪ್ರೀತಿ ನನಗೆ ತಲುಪಿದೆ
ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದುನಿಯಾ ವಿಜಯ್ ಮದುವೆಗೆ ಬಾರದಿದ್ದರೆ, ತಾಳಿಕಟ್ಟಿಸಿಕೊಳ್ಳುವುದಿಲ್ಲ: ಹಠ ಹಿಡಿದ ಯುವತಿ!
ತಂದೆ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಮಗನ ಮೇಲೆಯೇ ಹತ್ತಿದ ಕಾರು!
ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಹಿತ ಇಬ್ಬರು ಸಾವು: 12 ಮಂದಿಗೆ ಗಾಯ
ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನ್ನು ಕೊಚ್ಚಿ ಕೊಲೆಗೈದ ದರೋಡೆಕೋರರು!
ದೇವಸ್ಥಾನಕ್ಕೆ 20 ಸಾವಿರ ರೂಪಾಯಿ ದೇಣಿಗೆ ನೀಡಿದ ಭಿಕ್ಷುಕಿ!
ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ