ಪೊಲೀಸ್ ಠಾಣೆಯಿಂದ ಮನೆಗೆ ಬಂದ ಯುವತಿ ಆತ್ಮಹತ್ಯೆಗೆ ಶರಣು | ಪೊಲೀಸ್ ಠಾಣೆಯಲ್ಲಿ ನಡೆದದ್ದೇನು?
ಕೊಚ್ಚಿ: ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ ಯುವತಿಯೊಬ್ಬಳು, ಬಳಿಕ ತನ್ನ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಅಕುವಾದ ಎಡಯಪುರಂ ನಿವಾಸದಲ್ಲಿ ನಡೆದಿದೆ.
23 ವರ್ಷ ವಯಸ್ಸಿನ ಮೌಫಿಯಾ ಫರ್ವೀನ್ ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದಾರೆ. ಗಂಡನ ಮನೆಯಲ್ಲಿ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಫರ್ವೀನ್ ಪೊಲೀಸರಿಗೆ ದೂರು ನೀಡಿದ್ದರೆನ್ನಲಾಗಿದೆ. ಆದರೆ, ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೇ ರಾಜಿ ಮಾಡಿಸಲು ಪ್ರಯತ್ನಿಸಿದರು ಎಂದು ಫರ್ವೀನ್ ತನ್ನ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಪೊಲೀಸರಿಂದ ತನಗೆ ನ್ಯಾಯ ಸಿಗಲಿಲ್ಲ ಎಂಬ ಹತಾಶೆಯಿಂದ ಫರ್ವೀನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಪೊಲೀಸರು ಠಾಣೆಯಲ್ಲಿ ಸಂಧಾನ ನಡೆಸುತ್ತಿದ್ದ ವೇಳೆ ಪೊಲೀಸರ ಎದುರೇ ಫರ್ವೀನ್ ತನ್ನ ಪತಿಯ ಕಪಾಳಕ್ಕೆ ಬಾರಿಸಿದ್ದರೆನ್ನಲಾಗಿದೆ. ಇದಕ್ಕೆ ಆಕೆಯನ್ನು ಪೊಲೀಸರು ತರಾಟೆಗೆತ್ತಿಕೊಂಡಿದ್ದು, ಈ ರೀತಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಪತಿ ಹಾಗೂ ಅವರ ಕುಟುಂಬದವರ ಮುಂದೆ ಆದ ಅವಮಾನದಿಂದ ಬೇಸತ್ತು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಫರ್ವೀನ್ ತೋಡುಪುಳ್ಳಾದ ಖಾಸಗಿ ಕಾಲೇಜೊಂದರಲ್ಲಿ ಎಲ್ ಎಲ್ ಬಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಸದ್ಯ ಫರ್ವೀನ್ ಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಾಮಾಸ್ಸೆರಿ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕರ್ನಾಟಕದಾದ್ಯಂತ ದೊರೆತ ಭಾರೀ ಬೆಂಬಲಕ್ಕೆ ಮನತುಂಬಿ ಪತ್ರ ಬರೆದ ನಾದ ಬ್ರಹ್ಮ ಹಂಸಲೇಖ
ದುನಿಯಾ ವಿಜಯ್ ಮದುವೆಗೆ ಬಾರದಿದ್ದರೆ, ತಾಳಿಕಟ್ಟಿಸಿಕೊಳ್ಳುವುದಿಲ್ಲ: ಹಠ ಹಿಡಿದ ಯುವತಿ!
ತಂದೆ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಮಗನ ಮೇಲೆಯೇ ಹತ್ತಿದ ಕಾರು!
ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಹಿತ ಇಬ್ಬರು ಸಾವು: 12 ಮಂದಿಗೆ ಗಾಯ
ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಕೊಚ್ಚಿ ಕೊಂದ ಮಗಳ ಸ್ನೇಹಿತರು!
ರಾಜ್ಯ ಪ್ರವಾಹ ಸಂಕಷ್ಟದಲ್ಲಿರುವಾಗ ಬಿಜೆಪಿ—ಕಾಂಗ್ರೆಸ್ ನ ಬೇಜವಾಬ್ದಾರಿಯ ಜನ‘ಜಾತ್ರೆ’