ಆಟೋ ತಡೆದು ಸಹೋದರರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು
ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ಗ್ರಾಮದ ಗೋವಿಂದೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ ಗೋವಿಂದೂರು ಶಾಲೆಯ ಬಳಿಯ ನೆಲ್ಲಿಗುಡ್ಡೆ ನಿವಾಸಿ ಆಟೋ ಚಾಲಕ ಹೈದರ್ ಹಾಗೂ ಆತನ ಅಣ್ಣ ರಫೀಕ್ ರಾತ್ರಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಇದೇ ಪರಿಸರದ ಅಶುತೋಷ್ ಎಂಬಾತ ಹಾಗೂ ಆತನ ಇಬ್ಬರು ಸಹಚರರು ತಲ್ವಾರ್ ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಯಿಂದ ಹೈದರ್ ಗಂಭೀರವಾಗಿ ಗಾಯಗೊಂಡಿದ್ದು ಆತನ ಅಣ್ಣ ರಫೀಕ್ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಬೊಬ್ಬೆ ಕೇಳಿ ಸ್ಥಳೀಯರು ಓಡಿ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆ ನಡೆದ ರಾತ್ರಿಯೇ ಬೆಳ್ತಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆದಿ ಮೂವರು ಆರೋಪಿಗಳನ್ನು ಕೂಡ ಬಂಧಿಸಿದ್ದು, ಪೊಲೀಸರ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಡ ಹೆಣ್ಣು ಮಗಳ ಮೇಲೆ ಪೈಶಾಚಿಕ ಕೃತ್ಯ ಎಸಗಿ ಕೊಲೆ: ಮೌನಕ್ಕೆ ಶರಣಾದ ಮಂಗಳೂರಿನ ಸಂಘಟನೆಗಳು
ಪೊಲೀಸ್ ಠಾಣೆಯಿಂದ ಮನೆಗೆ ಬಂದ ಯುವತಿ ಆತ್ಮಹತ್ಯೆಗೆ ಶರಣು | ಪೊಲೀಸ್ ಠಾಣೆಯಲ್ಲಿ ನಡೆದದ್ದೇನು?
ಕರ್ನಾಟಕದಾದ್ಯಂತ ದೊರೆತ ಭಾರೀ ಬೆಂಬಲಕ್ಕೆ ಮನತುಂಬಿ ಪತ್ರ ಬರೆದ ನಾದ ಬ್ರಹ್ಮ ಹಂಸಲೇಖ
ದುನಿಯಾ ವಿಜಯ್ ಮದುವೆಗೆ ಬಾರದಿದ್ದರೆ, ತಾಳಿಕಟ್ಟಿಸಿಕೊಳ್ಳುವುದಿಲ್ಲ: ಹಠ ಹಿಡಿದ ಯುವತಿ!
ದುನಿಯಾ ವಿಜಯ್ ಮದುವೆಗೆ ಬಾರದಿದ್ದರೆ, ತಾಳಿಕಟ್ಟಿಸಿಕೊಳ್ಳುವುದಿಲ್ಲ: ಹಠ ಹಿಡಿದ ಯುವತಿ!