ಚಿಕ್ಕಬಳ್ಳಾಪುರದಲ್ಲೊಂದು ವಿಶೇಷ ಮದುವೆ: ಗಮನ ಸೆಳೆದ ವಿಶೇಷ ಜೋಡಿ - Mahanayaka
12:08 PM Thursday 12 - December 2024

ಚಿಕ್ಕಬಳ್ಳಾಪುರದಲ್ಲೊಂದು ವಿಶೇಷ ಮದುವೆ: ಗಮನ ಸೆಳೆದ ವಿಶೇಷ ಜೋಡಿ

chikkabalapura
29/11/2021

ಚಿಕ್ಕಬಳ್ಳಾಪುರ: ಗಂಡಿಗೆ 28 ವಯಸ್ಸು, ಹೆಣ್ಣಿಗೆ 25 ವರ್ಷವಾದರೂ ದೈಹಿಕ ಬೆಳವಣಿಗೆ ಕಾಣದೇ ಸಣ್ಣ ಮಕ್ಕಳಂತೆಯೇ ಇವರು ಕಾಣುತ್ತಿದ್ದರು. ಆದರೂ, ಈ ಎರಡೂ ಜೋಡಿಯನ್ನು ಪ್ರಕೃತಿಯೇ ಒಂದು ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಶ್ರೀ ಕ್ಷೇತ್ರ ಕೈವಾರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಈ ಜೋಡಿ ಎಲ್ಲರನ್ನೂ ಗಮನ ಸೆಳೆಯಿತು. ಆರಂಭದಲ್ಲಿ ಬಹಳಷ್ಟು ಜನರು ಇದು ಮಕ್ಕಳ ಮದುವೆ ಎಂದೇ ಅಂದುಕೊಂಡರೂ, ಆ ಬಳಿಕ ಇವರು ಈ ಪ್ರಕೃತಿಯ ವಿಸ್ಮಯ ಎನ್ನುವುದನ್ನು ಜನರೇ ಅರ್ಥ ಮಾಡಿಕೊಂಡು ನವ ವಧುವರರನ್ನು ಆಶೀರ್ವಾದಿಸಿದರು.

28 ವರ್ಷ ವಯಸ್ಸಿನ ವಿಷ್ಣು ಹಾಗೂ 25 ವರ್ಷ ವಯಸ್ಸಿನ ಜ್ಯೋತಿಯ ವಿವಾಹ ಇದೀಗ ಸುದ್ದಿಯಲ್ಲಿದೆ. ಇವರಿಬ್ಬರು ಕೂಡ ಪದವೀಧರರಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಈ ಅಪರೂಪದ ಜೋಡಿ ಕಾಲಜ್ಞಾನಿ ಕೈವಾರ ತಾತಯ್ಯನವರ ಕ್ಷೇತ್ರದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿರುವುದು ಇನ್ನೊಂದು ವಿಶೇಷವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಸರ್ಕಾರವನ್ನು ತರಾಟೆಗೆತ್ತಿಕೊಳ್ಳಲು ವಿಪಕ್ಷಗಳು ಸಜ್ಜು

ಶಾಕ್ ನೀಡಿದ ಜಿಯೋ: ಏರ್ಟೆಲ್ ವೊಡಾಫೋನ್ ಬಳಿಕ ಜಿಯೋ ರೀಚಾರ್ಜ್ ದರ ಏರಿಕೆ

“ನಾನು ಅಧಿಕಾರದಲ್ಲಿರಲು ಬಯಸುವುದಿಲ್ಲ” ಎಂದ ಪ್ರಧಾನಿ ನರೇಂದ್ರ ಮೋದಿ!

ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ

ಒಮಿಕ್ರಾನ್  ಭೀತಿಯ ನಡುವೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರಿಗೆ ಕೊವಿಡ್ ದೃಢ!

ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋದ ಬಂಡುಕೋರ | ರಮೇಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚ್

ಇತ್ತೀಚಿನ ಸುದ್ದಿ