ಒಮಿಕ್ರಾನ್: ಸಾವಿನ ಮೆರವಣಿಗೆ ಮತ್ತೆ ಬೇಡ, ಯಾರೂ ಎಚ್ಚರ ತಪ್ಪುವುದು ಬೇಡ | ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ 19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯದ ಜನತೆ ಜಾಗೃತಿಯ ಸಂದೇಶ ನೀಡಿದ್ದಾರೆ.
ಒಮಿಕ್ರಾನ್ ವಿಚಾರ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ನಡುವೆಯೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊರೋನಾ ಹೊಸ ತಳಿ ಒಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ ಎಂದು ಎಚ್ಚರಿಸಿದ್ದಾರೆ.
ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇದೆಯಾ? | ಸಚಿವ ಸುಧಾಕರ್ ನೀಡಿದ ಖಡಕ್ ಎಚ್ಚರಿಕೆ ಏನು?
ಚಿಕ್ಕಬಳ್ಳಾಪುರದಲ್ಲೊಂದು ವಿಶೇಷ ಮದುವೆ: ಗಮನ ಸೆಳೆದ ವಿಶೇಷ ಜೋಡಿ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ: ಸರ್ಕಾರವನ್ನು ತರಾಟೆಗೆತ್ತಿಕೊಳ್ಳಲು ವಿಪಕ್ಷಗಳು ಸಜ್ಜು
ಶಾಕ್ ನೀಡಿದ ಜಿಯೋ: ಏರ್ಟೆಲ್ ವೊಡಾಫೋನ್ ಬಳಿಕ ಜಿಯೋ ರೀಚಾರ್ಜ್ ದರ ಏರಿಕೆ
ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ
ಒಮಿಕ್ರಾನ್ ಭೀತಿಯ ನಡುವೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರಿಗೆ ಕೊವಿಡ್ ದೃಢ!