ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ! - Mahanayaka
6:17 PM Thursday 12 - December 2024

ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

varanasi
30/11/2021

ಲಕ್ನೋ: 6 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದ್ದು, ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ ಬಾಲಕಿಯ ಮೇಲೆ ಯುವಕ ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

27 ವರ್ಷ ವಯಸ್ಸಿನ ನಿಸಾರ್ ಎಂಬಾತ ಆರೋಪಿಯಾಗಿದ್ದು, ಮದುವೆಗೆಂದು ತನ್ನ ಅಜ್ಜಿಯ ಜೊತೆಗೆ ಬಂದಿದ್ದ 6 ವರ್ಷದ ಬಾಲಕಿ  ಲಲ್ಲಾಪುರಕ್ಕೆ ಹೋಗಿದ್ದು, ಈ ವೇಳೆ ಆರೋಪಿ ನಿಸಾರ್ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಇನ್ನೂ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಅನುಮಾನಗೊಂಡ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಆರೋಪಿಯ ಕೃತ್ಯವನ್ನು ತಿಳಿಸಿದ್ದಾಳೆ. ಈ ವೇಳೆ ಪೋಷಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ನಿಸಾರ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಸ್ಥಳೀಯ ಸಿಸಿ ಕ್ಯಾಮರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಬಾಲಕಿಯಿಂದ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಲ್ಯಾಣ ಮಂಟಪಕ್ಕೆ ಬೆಂಕಿ ಬಿದ್ದರೂ, ನಿಶ್ಚಿಂತೆಯಿಂದ ಊಟ ಮುಂದುವರಿಸಿದ ಅತಿಥಿಗಳು! ವಿಡಿಯೋ ವೈರಲ್

ಆಸ್ಪತ್ರೆಯ ಶೈತ್ಯಾಗಾರದಲ್ಲಿ 15 ತಿಂಗಳಿನಿಂದ ಕೊಳೆಯುತ್ತಿದ್ದ 2 ಕೊವಿಡ್ ಮೃತದೇಹಗಳು!

ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನ ರಕ್ಷಣೆಗೆ ಮುಂದಾಗಿದ್ದ ಯುವಕನನ್ನು ಥಳಿಸಿಕೊಂದ ಗುಂಪು!

ಆಟೋಗೆ ಡಿಕ್ಕಿ ಹೊಡೆದ ಲಾರಿ: ಬಾಲಕನ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನ ರಕ್ಷಣೆಗೆ ಮುಂದಾಗಿದ್ದ ಯುವಕನನ್ನು ಥಳಿಸಿಕೊಂದ ಗುಂಪು!

ಹೃದಯಾಘಾತವಾದ ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗ ವೈದ್ಯರಿಗೂ ಹೃದಯಾಘಾತ!

ಒಮಿಕ್ರಾನ್: ಸಾವಿನ ಮೆರವಣಿಗೆ ಮತ್ತೆ ಬೇಡ, ಯಾರೂ ಎಚ್ಚರ ತಪ್ಪುವುದು ಬೇಡ | ಹೆಚ್.ಡಿ.ಕುಮಾರಸ್ವಾಮಿ

ಇತ್ತೀಚಿನ ಸುದ್ದಿ