ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದ ನಗರ ಪಾಲಿಕೆ: ಕತ್ತುಕೊಯ್ದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ
ಮೈಸೂರು: ನಗರ ಪಾಲಿಕೆಯು ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದರಿಂದ ನೊಂದು ಯುವಕನೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಡುವಾರಹಳ್ಳಿಯಲ್ಲಿ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ನಗರದ ಮಾತೃಮಂಡಳಿ ಶಾಲೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಎಂದು ಈ ಹಿಂದಿನಿಂದಲೂ ವ್ಯಾಪಕ ಒತ್ತಾಯ ಕೇಳಿ ಬಂದಿದ್ದರೂ ನಗರ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಡುವಾರಹಳ್ಳಿ ನಿವಾಸಿಗಳು ಪಡುವಾರಗಹಳ್ಳಿಯ ಮಾತೃಮಂಡಳಿ ವೃತ್ತದಲ್ಲಿ ರಾತ್ರೋರಾತ್ರಿ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿದ್ದರು ಎನ್ನಲಾಗಿದೆ.
ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ನಗರ ಪಾಲಿಕೆಯ ಅನುಮತಿ ಪಡೆದುಕೊಂಡಿಲ್ಲ ಎಂಬ ನೆಪ ಹೇಳಿ ನಗರ ಪಾಲಿಕೆಯು ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದ್ದು, ಈ ವೇಳೆ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ರಾಜೇಶ್ ಎಂಬ ಯುವಕ ಬ್ಲೇಡ್ ನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ಘಟನೆಯಿಂದ ರೊಚ್ಚಿಗೆದ್ದ ಯುವಕರು ಹಾಗೂ ಗ್ರಾಮಸ್ಥರು, ನಗರ ಪಾಲಿಕೆಯ ಅಧಿಕಾರಿಗಳ ಕ್ರಮವನ್ನು ಖಂಡಿಸಿ ವಿವಿಧ ದಲಿತ ಸಂಘಟನೆಗಳೊಂದಿಗೆ ತೀವ್ರ ಪ್ರತಿಭಟನೆ ಆರಂಭಿಸಿದ್ದು, ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸದ್ಯ ಮಾತೃಮಂಡಳಿ ವೃತ್ತದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಮಾತೃ ಮಂಡಳಿ ವೃತ್ತವನ್ನು ಅಂಬೇಡ್ಕರ್ ವೃತ್ತ ಮಾಡುವಂತೆ ಕಳೆದ 12 ವರ್ಷಗಳಿಂದ ಇಲ್ಲಿನ ಯುವಕರು, ಸಂಘಟನೆಗಳು ಸಂಬಂಧಪಟ್ಟವರಿಗೆ ಮನವಿ ಮಾಡುತ್ತಲೇ ಇದ್ದಾರೆ. ಆದರೆ, ಇದರ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ಡಿಸೆಂಬರ್ 6ರಂದು ಅಂಬೇಡ್ಕರ್ ಪರಿನಿಬ್ಬಾಣ ಆಚರಣೆಯ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾಮಸ್ಥರು ಮತ್ತು ಯುವಕರು ಅಂಬೇಡ್ಕರ್ ಅವರ 8 ಅಡಿ ಕಂಚಿನ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಇದು ಮಹಾ ಅಪರಾಧ ಎಂಬಂತೆ ಪಾಲಿಕೆ ಅಧಿಕಾರಿಗಳು ಇದನ್ನು ಏಕಾಏಕಿ ತೆರವುಗೊಳಿಸಿದ್ದಾರೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಸ್ಥಳದಲ್ಲಿ ಧರಣಿ ಮಾಡುತ್ತಿರುವ ಪ್ರತಿಭಟನಾಕಾರರು, ಇಲ್ಲಿ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಪ್ರತಿಮೆಯನ್ನು ವಾಪಸ್ ತಂದು ಅದನ್ನು ಸ್ಥಾಪಿಸಿದ್ದ ಸ್ಥಳದಲ್ಲಿಯೇ ಸ್ಥಾಪಿಸಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಈಶ್ವರಪ್ಪ ಪೆದ್ದ, ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲ | ಸಿದ್ದರಾಮಯ್ಯ ವ್ಯಂಗ್ಯ
ಯುವತಿಯ ಎದುರು ಓಲಾ ಕ್ಯಾಬ್ ಚಾಲಕನಿಂದ ಅಶ್ಲೀಲ ವರ್ತನೆ!
ರಸ್ತೆಗೆ ತೆಂಗಿನ ಕಾಯಿ ಒಡೆದು ಉದ್ಘಾಟನೆ: ತೆಂಗಿನ ಕಾಯಿ ಬದಲು ಬಿರುಕು ಬಿಟ್ಟ ರಸ್ತೆ | ಬಿಜೆಪಿ ಶಾಸಕಿಗೆ ಮುಜುಗರ
ಮಂಗಳೂರು: ಶಾಲಾ ವಾಹನ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!
ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು