ಪೊಲೀಸರನ್ನು ನಾಯಿಗಳು ಎಂದು ನಿಂದನೆ: ಗೃಹ ಸಚಿವರ ವಿರುದ್ಧವೇ ದೂರು ದಾಖಲು - Mahanayaka
12:20 AM Tuesday 4 - February 2025

ಪೊಲೀಸರನ್ನು ನಾಯಿಗಳು ಎಂದು ನಿಂದನೆ: ಗೃಹ ಸಚಿವರ ವಿರುದ್ಧವೇ ದೂರು ದಾಖಲು

araga jnanendra
04/12/2021

ಚಿಕ್ಕಮಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರನ್ನು ನಾಯಿಗಳು ಎಂದು ಅವಾಚ್ಯವಾಗಿ ಬೈಯ್ಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ, ಜ್ಞಾನೇಂದ್ರ  ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲಿರುವ ಗೌರವ ಕಡಿಮೆಯಾಗುತ್ತದೆ. ಸಮಾಜದ ಶಾಂತಿ ಹಾಗೂ ಮಕ್ಕಳು, ಮಹಿಳೆಯರ ರಕ್ಷಣೆಯಲ್ಲಿ ಪೊಲೀಸರ ಪಾತ್ರಾ ಪ್ರಮುಖವಾಗಿದೆ. ಹಗಲಿರುಳೆನ್ನದೇ ಪೊಲೀಸರು ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡುತ್ತಾರೆ. ಇಂತಬ ಪೊಲೀಸರನ್ನು ನಾಯಿಗೆ ಹೋಲಿಸಿರುವುದು ಖಂಡನೀಯ ಎಂದು ರೈತ ಮುಖಂಡ ನವೀನ್ ಕುರವಾನೆ ದೂರಿನಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಯ ವಿರುದ್ಧ ಫೋನ್​ನಲ್ಲಿ ಮಾತನಾಡಿರುವ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಗೆ ಕೈ ತುಂಬಾ ಸಂಬಳ ಕೊಟ್ಟರೂ ಲಂಚ ತಿಂದುಕೊಂಡು ನಾಯಿಯ ಹಾಗೆ ಬಿದ್ದಿರುತ್ತಾರೆ. ಪೊಲೀಸರೆಲ್ಲ ಕೆಟ್ಟು ಹೋಗಿದ್ದಾರೆ, ಎಂಜಲು ಕಾಸನ್ನು ತಿಂದು ಬದುಕುತ್ತಿದ್ದಾರೆ. ಪೊಲೀಸರಾಗಲು ಯೋಗ್ಯತೆ ಇಲ್ಲದಿದ್ದ ಮೇಲೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ ಎಂದು ಕೂಗಾಡಿರುವ ವಿಡಿಯೋ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದ ನಗರ ಪಾಲಿಕೆ: ಕತ್ತುಕೊಯ್ದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ಈಶ್ವರಪ್ಪ ಪೆದ್ದ, ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲ | ಸಿದ್ದರಾಮಯ್ಯ ವ್ಯಂಗ್ಯ

ಯುವತಿಯ ಎದುರು ಓಲಾ ಕ್ಯಾಬ್ ಚಾಲಕನಿಂದ ಅಶ್ಲೀಲ ವರ್ತನೆ!

ರಸ್ತೆಗೆ ತೆಂಗಿನ ಕಾಯಿ ಒಡೆದು ಉದ್ಘಾಟನೆ: ತೆಂಗಿನ ಕಾಯಿ ಬದಲು ಬಿರುಕು ಬಿಟ್ಟ ರಸ್ತೆ | ಬಿಜೆಪಿ ಶಾಸಕಿಗೆ ಮುಜುಗರ

ಮಂಗಳೂರು: ಶಾಲಾ ವಾಹನ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

ಇತ್ತೀಚಿನ ಸುದ್ದಿ