“ನಿನ್ನನ್ನು ನೋಡೋಕೆ ಬಂದಿದ್ದೀನಿ…” | ಪುಟಾಣಿ ಅಭಿಮಾನಿ ಜೊತೆಗೆ ಸಿದ್ದರಾಮಯ್ಯ ಮಾತು
ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಪ್ರಚಾರದ ಬಿಝಿಯಲ್ಲಿಯೂ ಸಿದ್ದರಾಮಯ್ಯನವರು ತಮ್ಮ ಪುಟಾಣಿ ಅಭಿಮಾನಿಯ ಜೊತೆಗೆ ಕಾಲ ಕಳೆದಿದ್ದಾರೆ. ಕೆಲ ಹೊತ್ತು ಸಿದ್ದರಾಮಯ್ಯನವರು ಹಾಗೂ ಪುಟಾಣಿಯ ಸಂಭಾಷಣೆ ನಡೆಯಿತು. ಈ ಫೋಟೋ, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾರ್ ಅವರು ತಮ್ಮ ಮಗಳು ಸಾನ್ವಿಯನ್ನು ಸಿದ್ದರಾಮಯ್ಯನವರನ್ನು ಭೇಟಿ ಮಾಡಲು ಕರೆದುಕೊಂಡು ಬಂದಿದ್ದಾರೆ. ಸಾನ್ವಿಯನ್ನು ನೋಡುತ್ತಿದ್ದಂತೆಯೇ ಸಿದ್ದರಾಮಯ್ಯನವರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
ಸಾನ್ವಿಯನ್ನು ಹತ್ತಿರ ಕರೆದು, “ನೀನು ಇಲ್ಲಿಗೇಕೆ ಬಂದಿದ್ದೀಯಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಸಿದ್ದರಾಮಯ್ಯನವರ ಪ್ರಶ್ನೆ ಮುಗಿಯುತ್ತಿದ್ದಂತೆಯೇ “ನಿನ್ನನ್ನು ನೋಡೋಕೆ ಬಂದಿದ್ದೀನಿ” ಎಂದು ಸಾನ್ವಿ ಉತ್ತರಿಸಿದ್ದಾಳೆ. ಈ ಉತ್ತರ ಕೇಳಿ ಸುತ್ತಲು ಇದ್ದ ಪಕ್ಷದ ಕಾರ್ಯಕರ್ತರು ಜೋರಾಗಿ ನಕ್ಕಿದ್ದಾರೆ.
ಇನ್ನೂ ಸಿದ್ದರಾಮಯ್ಯನವರಿಗೆ ನಿರಂತರವಾಗಿ ಕರೆಗಳು ಬರುತ್ತಿದ್ದರೂ, ಅವರ ಜೊತೆಗೆ ಮಾತನಾಡುತ್ತಲೇ, ಕೆಲವು ನಿಮಿಷಗಳ ಕಾಲ ಸಾನ್ವಿಯನ್ನು ಮಾತನಾಡಿಸಿದರು. ಬಳಿಕ ಕೆನ್ನೆಗೆ ಒಂದು ಮುತ್ತು ಕೊಡಿಸಿಕೊಂಡು ಸಂತಸ ವ್ಯಕ್ತಪಡಿಸಿದರು. ರಾಜಕೀಯ ಜಂಜಾಟದ ನಡುವೆಯೇ ಸಿದ್ದರಾಮಯ್ಯನವರು ಸ್ವಲ್ಪ ಕಾಲ ಎಲ್ಲವನ್ನೂ ಮರೆತು ಪುಟಾಣಿ ಜೊತೆಗೆ ಮಾತನಾಡಿದರು.
ಈ ವಿಡಿಯೋ, ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಿದ್ದರಾಮಯ್ಯನವರ ಪ್ರಶ್ನೆಗೆ ಅವರದ್ದೇ ದಾಟಿಯಲ್ಲಿ ಮಗು ಉತ್ತರಿಸಿದ್ದು, ಎಲ್ಲರಿಗೂ ನಗು ಉಕ್ಕಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭೀಕರ ಜ್ವಾಲಾಮುಖಿ ಸ್ಫೋಟ: 13 ಮಂದಿ ಸಾವು, ಗ್ರಾಮ ಬಿಟ್ಟು ಓಡಿದ ಜನ
ಇಂದು ಅಗಲಿದ ಹಿರಿಯ ನಟ ಶಿವರಾಮ್ ಅವರ ಅಂತ್ಯಕ್ರಿಯೆ
ತಂದೆಯ ಕಣ್ಣ ಮುಂದೆಯೇ ನೀರಿನಲ್ಲಿ ಕೊಚ್ಚಿ ಹೋದ ಯುವಕ!
ಭೀಕರ ಕೊಲೆ: ಒಮಿಕ್ರಾನ್ ಗೆ ಹೆದರಿ ಪತ್ನಿ, ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಬರ್ಬರ ಹತ್ಯೆ