ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದ ಗುಡಿ’ ಟೀಸರ್ ಬಿಡುಗಡೆ: ವಿಡಿಯೋ ನೋಡಿ - Mahanayaka

ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದ ಗುಡಿ’ ಟೀಸರ್ ಬಿಡುಗಡೆ: ವಿಡಿಯೋ ನೋಡಿ

gandhada gudi
06/12/2021

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಸಾಕ್ಷ್ಯಚಿತ್ರ ಗಂಧದ ಗುಡಿಯ ಟೀಸರ್ ಇಂದು ಬಿಡುಗಡೆಯಾಗಿದ್ದು,  ಪಿಆರ್ ಕೆ ಆಡಿಯೋ ಮೂಲಕ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ. ಟೈಟಲ್ ಟೀಸರ್ ಅದ್ಭುತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕರ್ನಾಟಕದ ದಟ್ಟ ಕಾಡುಗಳಲ್ಲಿ ಇದನ್ನು ಚಿತ್ರೀಕರಿಸಲಾಗಿದ್ದು, ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುವಂತಿದೆ. ಅಂದ ಹಾಗೆ ಗಂಧದ ಗುಡಿ ಸಾಕ್ಷ್ಯ ಚಿತ್ರ ಥಿಯೇಟರ್ ನಲ್ಲಿಯೇ ಬಿಡುಗಡೆಯಾಗಲಿದೆ. 2022ರಲ್ಲಿ ಚಿತ್ರ ಮಂದಿರಗಳಲ್ಲಿ ಇದನ್ನು ತೆರೆ ಕಾಣಿಸಲು ಚಿಂತಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಅವರ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ದಿನದಂದೇ ಟೈಟಲ್ ಟೀಸರ್ ಇಂದು ಬಿಡುಗಡೆಯಾಗಿದೆ. ಗಂಧದ ಗುಡಿ ಟೈಟಲ್ ನ ಕೊನೆಯಲ್ಲಿ  ಡಾ.ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾದ ಡೈಲಾಗ್ ಕೂಡ ಕೇಳಿ ಬಂದಿದ್ದು, ಇದು ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲವನ್ನು ಮೂಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಐವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ | ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

ನವಜಾತ ಶಿಶುವನ್ನು ಪೊದೆಗೆ ಎಸೆದು ಹೋಗಿದ್ದ ಪೋಷಕರ ಬಂಧನ

ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ | ಹೆಚ್.ಡಿ.ಕುಮಾರಸ್ವಾಮಿ

ಬದುಕಿನ ದಾರಿ ಮುಗಿಸಿ ಹೊರಟೇ ಬಿಟ್ಟರು: ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರ ಜೊತೆಗೆ ನಟಿಸಿದ್ದ ಶಿವರಾಮಣ್ಣ

ಇತ್ತೀಚಿನ ಸುದ್ದಿ