ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು
ಆನೆಕಲ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ವೇಣುಗೋಪಾಲ ನಗರದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ ವೈಷ್ಣವಿ ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದ್ದು, ರಾತ್ರಿ ಕುಟುಂಬದ ಜೊತೆಗೆ ಊಟ ಮಾಡಿದ್ದಳು ಆ ಬಳಿಕ ಮನೆಯವರು ಹಾಲ್ ನಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಬಾಲ್ಕನಿ ಲಾಕ್ ಮಾಡಿಕೊಂಡು ಆಟವಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶ ಮೂಲದ ಈ ಕುಟುಂಬ ಕಳೆದ 20 ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದರು. ವೈಷ್ಣವಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎನ್ನುವುದು ತಿಳಿದು ಬಂದಿಲ್ಲ.
ಏನೋ ಬಿದ್ದ ಶಬ್ಧ ಕೇಳಿ ಬಾಲ್ಕನಿಗೆ ಹೋಗಿ ನೋಡಿದಾಗ ಬಾಲಕಿ ಮಹಡಿಯಿಂದ ಕೆಳಗೆ ಬಿದ್ದಿರುವುದು ಗೊತ್ತಾಗಿದೆ ಎಂದು ಪೋಷಕರು ತಿಳಿಸಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಾಂಶುಪಾಲರಿಗೆ ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ 15ರ ಬಾಲಕ!
ಕಾಮೋದ್ರೇಕಕಾರಿ ಮದ್ದು ನೀಡಿ ಯುವಕನಿಂದ ಅತ್ಯಾಚಾರ: ಬಾಲಕಿ ಸಾವು
ಬಾಬಾಸಾಹೇಬ್ ಅಂಬೇಡ್ಕರ್ ರ ಕೊನೆಯ ಸಂದೇಶ
ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಮನ
ಮಕ್ಕಳನ್ನು ಮನೆಯಲ್ಲಿಯೇ ಬಂಧಿಸಿದ ತಾಯಿ: ಮಕ್ಕಳ ಅಳು ಕೇಳಲಾರದೇ ಸ್ಥಳೀಯರಿಂದ ದೂರು
ಶಾಲಾ, ಕಾಲೇಜುಗಳಲ್ಲಿ ಕೊವಿಡ್ ಹೆಚ್ಚಳ: ಶಾಲಾ ಕಾಲೇಜುಗಳು ಮತ್ತೆ ಬಂದ್ ಆಗುತ್ತಾ?