ಬಿಪಿನ್ ರಾವತ್ ಸೇರಿದಂತೆ 9 ಮಂದಿಯಿದ್ದ ಸೇನಾ ವಿಮಾನ ಪತನ: ನಾಲ್ವರ ಮೃತದೇಹ ಪತ್ತೆ, ಮೂವರ ಸ್ಥಿತಿ ಗಂಭೀರ
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ.
ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ಸೂಲೂರಿನ ಸೇನಾ ನೆಲೆಯಿಂದ ಮೀ-ಸಿರೀಸ್ ಹೆಲಿಕಾಫ್ಟರ್ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ನೀಲಗಿರಿಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ಘಟನೆಯನ್ನು ಭಾರತೀಯ ವಾಯಸೇನೆ ಕೂಡ ಟ್ವೀಟ್ ಮಾಡಿ ದೃಢಪಡಿಸಿದ್ದು, ಬಿಪಿನ್ ರಾವತ್ ಇದ್ದ ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದ್ದು, ಇದಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾಹಿತಿಗಳ ಪ್ರಕಾರ ಹೆಲಿಕಾಫ್ಟರ್ ನಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ ತೇಜ್, ಹವಲ್ದಾರ್ ಸತ್ಪಾಲ್ ಇದ್ದರು ಎಂದು ತಿಳಿದು ಬಂದಿದೆ.
ಹೆಲಿಕಾಫ್ಟರ್ ನಲ್ಲಿ ಬೆಂಕಿ ಹೊತ್ತಿ ಉರಿಯುತ್ತಲೇ ಇದೆ. ವಿಮಾನ ಬಿದ್ದಿರುವ ದೃಶ್ಯ ನೋಡಿದರೆ, ಅದರಲ್ಲಿದ್ದವರ ಸ್ಥಿತಿಯ ಬಗ್ಗೆ ಆತಂಕ ಸೃಷ್ಟಿಯಾಗುತ್ತಿದೆ. ವರದಿಗಳ ಪ್ರಕಾರ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು, ಈ ಪೈಕಿ ಇಬ್ಬರ ಮೃತದೇಹ ಶೇ.80ರಷ್ಟು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ: ಸಿಎಂ ಬೊಮ್ಮಾಯಿ ಹೇಳಿದ್ದೇನು?
ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ
ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್
ಸರ್ಕಾರಿ ಶಾಲೆಗಳ ಹೀನಾಯ ಸ್ಥಿತಿಯ ಬಗ್ಗೆ ಧ್ವನಿ ಎತ್ತದ ಸ್ವಾಮೀಜಿಗಳು ಮೊಟ್ಟೆಗೆ ವಿರೋಧ ಮಾಡ್ತಿದ್ದಾರೆ!
ಕಾಲಿನಲ್ಲಿ ವೈಡ್ ಬಾಲ್ ಎಂದು ಸೂಚಿಸಿದ ಅಂಪೈರ್: ಬಿದ್ದು ಬಿದ್ದು ನಕ್ಕ ನೆಟ್ಟಿಗರು
ಗಗನಕ್ಕೇರಿದ ಟೊಮೆಟೋ ಬೆಲೆ: ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ!