ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ಡೆತ್ ನೋಟ್ ಆಧಾರದಲ್ಲಿ ಓರ್ವ ಮಹಿಳೆ ಪೊಲೀಸ್ ವಶಕ್ಕೆ
ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಬಳಿಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದ ನಿವಾಸಿಗಳು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
30 ವರ್ಷದ ನಾಗೇಶ್ ಶೇರಿಗುಪ್ಪಿ ಹಾಗೂ ಅವರ ಪತ್ನಿ 26 ವರ್ಷ ವಯಸ್ಸಿನ ವಿಜಯಲಕ್ಷ್ಮೀ, ಮಕ್ಕಳಾದ 8 ವರ್ಷ ವಯಸ್ಸಿನ ಸ್ವಪ್ನಾ, 4 ವರ್ಷದ ಸಮರ್ಥ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ನಾಗೇಶ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಇವರ ಪತ್ನಿ ವಿಜಯಲಕ್ಷ್ಮೀ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳ ಮೃತದೇಹ ವಿಷ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಇನ್ನೂ ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ಕೌಟುಂಬಿಕ ಕಲಹ ಹಾಗೂ ಮತಾಂತರದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೇಲ್ನೋಟದಿಂದ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಘಟನೆ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾಗೇಶ್ ಬರೆದಿದ್ದಾರೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ನೂರ್ ಜಹಾನ್ ಎಂಬ ಹೆಸರಿನ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದರು.
ತನ್ನ ಪತ್ನಿ ವಿಜಯಲಕ್ಷ್ಮೀಯು ನೂರ್ ಜಹಾನ್ ಎಂಬ ಮಹಿಳೆಯ ಜೊತೆಗೆ ಜಾಸ್ತಿ ಸಂಪರ್ಕದಲ್ಲಿದ್ದಳು. ಅಲ್ಲದೇ ಮತಾಂತರ ಪ್ರಯತ್ನ ಕೂಡ ನಡೆದಿತ್ತು ಎಂದು ನಾಗೇಶ್ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ಆದರೆ, ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ ವಿಜಯಲಕ್ಷ್ಮೀ ನೂರ್ ಜಹಾನ್ ಅವರ ಮನೆಗೆ ಕೆಲಸಕ್ಕೆ ಹೋಗುತ್ತಿದ್ದಳು. ಇದು ನಾಗೇಶ್ ಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಎಲ್ಲೂ ಕೆಲಸಕ್ಕೆ ಹೋಗಬೇಡ, ಮನೆಯಲ್ಲೇ ಬಿದ್ದಿರು ಎಂದು ಪತ್ನಿಗೆ ಹೊಡೆಯುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇನ್ನೂ ನಾಗೇಶ್ ಹಾಗೂ ಪತ್ನಿ ವಿಜಯಲಕ್ಷ್ಮೀ ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು. ಅಕ್ಟೋಬರ್ ತಿಂಗಳಿನಲ್ಲಿ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿರುವ ಬಗ್ಗೆ ಪತ್ನಿಯ ವಿರುದ್ಧ ನಾಗೇಶ್ ದೂರು ನೀಡಿದ್ದ. ಆ ಬಳಿಕ ಠಾಣೆಗೆ ಹಾಜರಾಗಿದ್ದ ವಿಜಯಲಕ್ಷ್ಮೀ, ಗಂಡ ಹೊಡೆಯುತ್ತಾನೆ, ಕುಡಿದು ಬಂದು ಹಿಂಸೆ ನೀಡುತ್ತಾನೆ. ಇದೇ ಕಾರಣಕ್ಕೆ ನಾನು ಮನೆ ಬಿಟ್ಟು ಹೋಗಿದ್ದೆ ಎಂದು ಹೇಳಿದ್ದಳು. ಆತ ಏನೂ ತೊಂದರೆ ಕೊಡುವುದಿಲ್ಲ ಎಂದಾದರೆ, ನಾನು ಆತನೊಂದಿಗೆ ತೆರಳಿ ಜೀವನ ನಡೆಸುತ್ತೇನೆ ಎಂದು ಹೇಳಿದ್ದರು ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಡೆತ್ ನೋಟ್ ಆಧಾರದಲ್ಲಿ ನೂರ್ ಜಹಾನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಪಿನ್ ರಾವತ್ ಸೇರಿದಂತೆ 9 ಮಂದಿಯಿದ್ದ ಸೇನಾ ವಿಮಾನ ಪತನ: ನಾಲ್ವರ ಮೃತದೇಹ ಪತ್ತೆ, ಮೂವರ ಸ್ಥಿತಿ ಗಂಭೀರ
ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ: ಸಿಎಂ ಬೊಮ್ಮಾಯಿ ಹೇಳಿದ್ದೇನು?
ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ
ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್
ಸರ್ಕಾರಿ ಶಾಲೆಗಳ ಹೀನಾಯ ಸ್ಥಿತಿಯ ಬಗ್ಗೆ ಧ್ವನಿ ಎತ್ತದ ಸ್ವಾಮೀಜಿಗಳು ಮೊಟ್ಟೆಗೆ ವಿರೋಧ ಮಾಡ್ತಿದ್ದಾರೆ!
ಕಾಲಿನಲ್ಲಿ ವೈಡ್ ಬಾಲ್ ಎಂದು ಸೂಚಿಸಿದ ಅಂಪೈರ್: ಬಿದ್ದು ಬಿದ್ದು ನಕ್ಕ ನೆಟ್ಟಿಗರು