ಶಿಕ್ಷಕರ ಮೇಲೆ ವಿದ್ಯಾರ್ಥಿಗಳಿಂದ ಪುಂಡಾಟಿಕೆ: ವಿಡಿಯೋ ವೈರಲ್ ಆದ ಬಳಿಕ ನಡೆದದ್ದೇನು?
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ತರಗತಿ ನಡೆಯುತ್ತಿರುವ ವೇಳೆ ಶಿಕ್ಷಕರ ಮೇಲೆ ಮಕ್ಕಳು ಪುಂಡಾಟಿಕೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡಿಸೆಂಬರ್ 3ರಂದು ಹಿಂದಿ ಶಿಕ್ಷಕ ಪ್ರಕಾಶ್ ಬೋಗೆರ್ ಅವರು ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು, ಶಿಕ್ಷಕರ ತಲೆಯ ಮೇಲೆ ಕಸದ ಬುಟ್ಟಿಯನ್ನು ಹಾಕಿ ಗೇಲಿ ಮಾಡಿದ್ದಾರೆ. ಇದರ ನಡುವೆಯೂ ಶಿಕ್ಷಕರು ಪಾಠ ಮಾಡಲು ಮುಂದಾದಾಗ ವಿದ್ಯಾರ್ಥಿಗಳು ಮತ್ತೆ ಕಸದ ಬುಟ್ಟಿಯನ್ನು ಶಿಕ್ಷಕರ ತಲೆಗೆ ಸುರಿಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಇನ್ನೂ ವಿದ್ಯಾರ್ಥಿಗಳು ಪುಂಡಾಟಿಕೆ ಮೆರೆಯುತ್ತಿರುವ ದೃಶ್ಯವನ್ನು ವಿದ್ಯಾರ್ಥಿಯೊಬ್ಬ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು, ಗುರುವಾರ ರಾತ್ರಿ ಈ ವಿಡಿಯೋ ವೈರಲ್ ಆಗಿದ್ದು, ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.
ಸೌಮ್ಯ ಸ್ವಭಾವದ ಶಿಕ್ಷಕರಾಗಿರುವ ಪ್ರಕಾಶ್ ಅವರು, ವಿದ್ಯಾರ್ಥಿಗಳ ಪುಂಡಾಟಿಕೆಯ ವಿರುದ್ಧ ದೂರು ನೀಡಿರಲಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.
ಘಟನೆಯ ಮಾಹಿತಿ ಪಡೆದ ಚನ್ನಗಿರಿ ಶಾಸಕ ವಿರೂಪಾಕ್ಷಪ್ಪ, ಡಿಡಿಪಿಐ ಜಿ.ಆರ್.ತಿಪ್ಪೇಸ್ವಾಮಿ ಅವರು, ಶುಕ್ರವಾರ ಪದವಿ ಪೂರ್ವ ಕಾಲೇಜಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರು ಕೂಡ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾನೂನು ಕ್ರಮಕೈಗೊಳ್ಳುವುದ ಬೇಡ, ಆದರೆ, ಇನ್ನು ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಎಂಬ ಮುಚ್ಚಳಿಕೆ ಪತ್ರ ಬರೆಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಲಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಮನವಿಗೆ ಶಾಸಕರು ಹಾಗೂ ಶಿಕ್ಷಕರು ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.
ಇನ್ನೂ ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ್ ಅವರು ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿ, ಡಿಡಿಪಿಐ ಅವರಿಂದ ವರದಿ ತರಿಸಿಕೊಳ್ಳಲಾಗುವುದು. ಪ್ರಕರಣದಲ್ಲಿ ವಿದ್ಯಾರ್ಥಿಗಳಿಂದ ತಪ್ಪಾಗಿದೆಯೇ ಇಲ್ಲ. ಶಿಕ್ಷಕರಿಂದ ಲೋಪವಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾಸ್ಕ್ ಹಾಕಿಲ್ಲ ಎಂದು ಮಗಳ ಎದುರೇ ತಂದೆಯ ಕೆನ್ನೆಗೆ ಬಾರಿಸಿದ ಪೊಲೀಸ್ ಅಧಿಕಾರಿ | ಬಿಕ್ಕಿಬಿಕ್ಕಿ ಅತ್ತ ಮಗಳು
2 ಡೋಸ್ ಜೊತೆಗೆ ಬೂಸ್ಟರ್ ಡೋಸ್ ಪಡೆದುಕೊಂಡರೂ ಇಬ್ಬರಿಗೆ ವಕ್ಕರಿಸಿದ ಒಮಿಕ್ರಾನ್
ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ!
ರಾಜ್ಯದ ಜನತೆಗೆ ಬಿಗ್ ಶಾಕ್: ಬೇಸಿಗೆಗೆ ಮುನ್ನವೇ ಏರಿಕೆಯಾಗಲಿದೆಯೇ ವಿದ್ಯುತ್ ಬೆಲೆ?
ಮೊಟ್ಟೆ ಕೊಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ | ಪೇಜಾವರ ಶ್ರೀ