ಅಂತರ್ ಧರ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಹಲ್ಲೆ: ನಾಲ್ವರು ಆರೋಪಿಗಳ ಬಂಧನ - Mahanayaka
7:32 PM Wednesday 11 - December 2024

ಅಂತರ್ ಧರ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಹಲ್ಲೆ: ನಾಲ್ವರು ಆರೋಪಿಗಳ ಬಂಧನ

arrest
12/12/2021

ಮಂಗಳೂರು: ಬಸ್ಸಿನಲ್ಲಿ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಯ ಮೇಲೆ  ಸುಮಾರು 5ರಿಂದ 6 ಮಂದಿ ಅವರ ವಿವರಗಳನ್ನು ಕೇಳಿ, ಅವರ ಮನೆಯವರ ಬಗ್ಗೆ ವಿಚಾರಿಸಿ, ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ, ಯುವತಿಯ ಗೌರವಕ್ಕೆ ಧಕ್ಕೆ ಬರುವಂತೆ ವರ್ತಿಸಲಾಗಿತ್ತು. ಹಿಂದೂ ಹುಡುಗಿ ಮುಸ್ಲಿಮ್ ಹುಡುಗನೊಂದಿಗೆ ಸಿಕ್ಕಿ ಬಿದ್ದಿದ್ದಾಳೆ ಎಂಬ ವಿಡಿಯೋ ಮಾಡಿ ವೈರಲ್ ಮಾಡಲಾಗಿತ್ತು. ಈ ಮೂಲಕ ಎರಡು ಕೋಮುಗಳ ನಡುವಿನ ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲಾಗಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಯುವತಿ ಹಾಗೂ ಯುವಕ ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು,  ಅವರ ಕುಟುಂಬಸ್ಥರನ್ನು ಸಂಪರ್ಕಿಸಿ, ಅವರ ಹೇಳಿಕೆ ಪಡೆಯುವುದಾಗಿ ತಿಳಿಸಿದ ಅವರು, ಯುವಕ, ಯುವತಿಯನ್ನೂ ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ: ಮತಾಂತರಕ್ಕೆ ಯತ್ನಿಸಿರುವುದು ಪತ್ತೆ

ಬುಡಕಟ್ಟು ಮಹಿಳೆಯರ ಜೊತೆ ಪ್ರಿಯಾಂಕಾ ಗಾಂಧಿ ನೃತ್ಯ: ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದ ಬಿಜೆಪಿ!

ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯ ಮೇಲೆ ಲಾಠಿ ಚಾರ್ಜ್: ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ

ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?

ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?

ಇತ್ತೀಚಿನ ಸುದ್ದಿ