ಈ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಪಾಸ್: ಮಾಜಿ ಸಿಎಂ ಯಡಿಯೂರಪ್ಪ
ಹುಬ್ಬಳ್ಳಿ: ಬಲವಂತದ ಮತಾಂತರ ತಡೆಯಲು ಈಗಾಗಲೇ ಕಾಯ್ದೆಗಳಿದ್ದರೂ, ರಾಜ್ಯ ಸರ್ಕಾರ ಮತ್ತೆ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಮುಂದಾಗಿರುವುದರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವುದರ ನಡುವೆಯೇ ಇದೇ ಅಧಿವೇಶನದಲ್ಲಿ ಈ ಕಾಯ್ದೆ ಮಂಡನೆಯಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಇದೇ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಲಿದೆ ಎಂದು ಹೇಳಿದರು. ಅಧಿವೇಶನ ಮುಗಿಯುವ 2-3ದಿನಗಳೊಳಗೆ ಕಾಯ್ದೆ ಮಂಡನೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಕಾಯ್ದೆಗೆ ಕಾಂಗ್ರೆಸ್ ನಾಯಕರ ವಿರೋಧ ಸಹಜವಾಗಿ ಇರುತ್ತದೆ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಇದಕ್ಕೆ ವಿರೋಧ ಮಾಡುವುದು ಇದ್ದೇ ಇದೆ. ಆದರೆ, ಕಾಯ್ದೆ ಜಾರಿಯಾಗುವುದು ಖಚಿತ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರತದ ಹರ್ನಾಜ್ ಕೌರ್ ಸಂಧುಗೆ ಮಿಸ್ ಯುನಿವರ್ಸ್ ಕಿರೀಟ
ಡಾ.ಅಂಬೇಡ್ಕರರ ಕಣ್ಣೀರು ಒರೆಸುವ ಕೈಗಳು ಯಾರವು?
ಸ್ನೇಹಿತನ ಚಿನ್ನದಂಗಡಿಯಲ್ಲಿ ಕಳವು ನಡೆಸಲು ಸುಪಾರಿ ನೀಡಿದ ಇನ್ನೊಂದು ಚಿನ್ನದಂಗಡಿ ಮಾಲಿಕ!
ರಾಜ್ ಕುಮಾರ ಸಿನಿಮಾ ನೋಡ್ಲೇ ಬೇಕು ಮಾಮಾ ಅಂದಿದ್ರು ಪುನೀತ್ | ಸಿದ್ದರಾಮಯ್ಯ
ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಆನ್ ಲೈನ್ ಕವನ ಸ್ಪರ್ಧೆ
ಹಾಸ್ಟೆಲ್ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ: ಭದ್ರತಾ ಸಿಬ್ಬಂದಿ ಅರೆಸ್ಟ್