ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣಿನ ಜೊತೆಗೆ ಶೇಂಗಾ ಮಿಠಾಯಿ ನೀಡಲು ನಿರ್ಧಾರ! - Mahanayaka
3:31 AM Friday 20 - September 2024

ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣಿನ ಜೊತೆಗೆ ಶೇಂಗಾ ಮಿಠಾಯಿ ನೀಡಲು ನಿರ್ಧಾರ!

chikki
14/12/2021

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದರ ಕೆಲವು ಮಠಾಧೀಶರು ಹೋರಾಟ ನಡೆಸುತ್ತಿದ್ದು, ಕೇವಲ ಬಾಳೆಹಣ್ಣು ಮಾತ್ರವೇ ನೀಡಿ ಇಲ್ಲದಿದ್ದರೆ, ಬೀದಿಗಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಮೊಟ್ಟೆ ತಿನ್ನದವರ ಮಕ್ಕಳಿಗೆ ಬಾಳೆಹಣ್ಣಿನ ಜೊತೆಗೆ ಶೇಂಗಾ ಕೂಡ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮೊಟ್ಟೆ ಪೌಷ್ಠಿಕಾಂಶಗಳ ಆಗರವಾಗಿದ್ದು, ಹೀಗಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ ನೀಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದ್ದು, ಮೊಟ್ಟೆ ತಿನ್ನದವರ ಮಕ್ಕಳಿಗೆ ಬಾಳೆಹಣ್ಣು ನೀಡಲು ನಿರ್ಧರಿಸಲಾಗಿತ್ತು. ಆದರೆ ಬಾಳೆಹಣ್ಣಿನಲ್ಲಿ ಮಕ್ಕಳ ಪೋಷಣೆಗೆ ಬೇಕಾದಷ್ಟು ಪೌಷ್ಠಿಕಾಂಶ ಇಲ್ಲದ ಹಿನ್ನೆಲೆಯಲ್ಲಿ ಮೊಟ್ಟೆಯ ಜೊತೆಗೆ ಶೇಂಗಾ ಮಿಠಾಯಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

ಬಡವರ ಮಕ್ಕಳು ಕಲಿಯುತ್ತಿರುವ ಶಾಲೆಯಲ್ಲಿ ಮೊಟ್ಟೆ ನೀಡುತ್ತಿರುವುದನ್ನು ವಿರೋಧಿಸಿ, ಸಸ್ಯಾಹಾರ-ಮಾಂಸಾಹಾರ ಎಂಬ ಚರ್ಚೆ ತಂದಿರುವ ಹಿನ್ನೆಲೆಯಲ್ಲಿ ಬಡ ಮಕ್ಕಳ ಪೋಷಕರು ಚಿಂತಾಕ್ರಾಂತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಿದರೆ, ಪೌಷ್ಠಿಕ ಆಹಾರ ಕೂಡ ದೊರೆಯುತ್ತದೆ ಇದರಿಂದಾಗಿ ಮಕ್ಕಳು ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಪೋಷಕರು ನಿರೀಕ್ಷೆಯಲ್ಲಿದ್ದಾರೆ. ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯೂ ನೀಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿದ ತಕ್ಷಣದಲ್ಲಿಯೇ ಶಾಲೆಗೆ ಮಕ್ಕಳ ಹಾಜರಾತಿ ಕೂಡ ಹೆಚ್ಚಾಗಿದೆ. ಹೀಗಾಗಿ ಈ ಯೋಜನೆಯನ್ನು ಯಾವುದೇ ಕಾರಣಕ್ಕೆ ನಿಲ್ಲಿಸಬಾರದು ಎನ್ನುವ ಒತ್ತಾಯಗಳು ಕೇಳಿ ಬಂದಿವೆ.


Provided by

ಕೇವಲ ಮೊಟ್ಟೆ ಮಾತ್ರವಲ್ಲ, ವಾರದಲ್ಲಿ ಕನಿಷ್ಠ ಎರಡು ಬಾರಿಯಾದರೂ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿಯೂ ಚಿಕನ್ ಪದಾರ್ಥ ನೀಡಬೇಕು. ಈ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೆಳೆಯಬಹುದಾಗಿದೆ. ಸಸ್ಯ ಮತ್ತು ಮಾಂಸ ಎನ್ನುವ ಭಾವಗಳಿದ್ದರೆ, ಶಾಲೆಯಲ್ಲಿ ಊಟಕ್ಕೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಬಹುದಲ್ಲವೇ? ಎನ್ನುವ ಅಭಿಪ್ರಾಯಗಳು ಇದೀಗ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಧಾನ ಪರಿಷತ್ ಫಲಿತಾಂಶ: ಕಾಂಗ್ರೆಸ್ ಗೆಲುವು ಸಾಧಿಸಿದ ಕ್ಷೇತ್ರಗಳು

ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳು

ಕುದಿಯುತ್ತಿದ್ದ ನೀರಿಗೆ ಬಿದ್ದು 2 ವರ್ಷದ ಮಗುವಿನ ದಾರುಣ ಸಾವು!

ಡಾನ್ಸ್ ಬಾರ್ ನ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರ ರಕ್ಷಣೆ!

ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು

ಹಾಸನ: ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು

ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ!

ಇತ್ತೀಚಿನ ಸುದ್ದಿ