ಬೂದಿ ಮುಚ್ಚಿದ ಕೆಂಡದಂತಿದ್ದ ಉಪ್ಪಿನಂಗಡಿ ಸಹಜ ಸ್ಥಿತಿಯತ್ತ!
ಉಪ್ಪಿನಂಗಡಿ: ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಪರಿಣಾಮ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಿದ್ದು ಉಪ್ಪಿನಂಗಡಿ ಸಹಜ ಸ್ಥಿತಿಗೆ ಮರಳುತ್ತಿದೆ.
ಹಳೆಗೇಟ್ ನ ಸುಬ್ರಹ್ಮಣ್ಯ ಕ್ರಾಸ್ ಬಳಿ ಇತ್ತೀಚೆಗೆ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಮಂಗಳವಾರ ಉಪ್ಪಿನಂಗಡಿ ಠಾಣೆ ಎದುರು ಪ್ರತಿಭಟನೆ ನಡೆಸಿದ ಪಿಎಫ್ ಐ ಕಾರ್ಯಕರ್ತರು, ಮುಖಂಡರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿದ್ದರು.
https://twitter.com/yhpfi/status/1470797668750217216?s=20
ಈ ವೇಳೆ ವಶಪಡಿಸಿಕೊಂಡವರನ್ನು ಸಂಜೆ ವೇಳೆ ಬಿಡುಗಡೆ ಮಾಡುವುದಾಗಿ ಪೊಲೀಸರು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಈ ನಡುವೆ ಪುತ್ತೂರು ತಹಶೀಲ್ದಾರ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಿದ್ದರು.
ಇದಾದ ಬಳಿಕ ರಾತ್ರಿ ವೇಳೆ ವಶಪಡಿಸಿಕೊಂಡಿದ್ದ ಮುಖಂಡರ ಪೈಕಿ ಓರ್ವನನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಉಳಿದ ಇಬ್ಬರನ್ನು ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಪಿಎಫ್ ಐ ಕಾರ್ಯಕರ್ತರು 9:30ರ ವೇಳೆಗೆ ಮತ್ತೆ ಠಾಣೆಗೆ ಆಗಮಿಸಿದ್ದು, ಠಾಣೆಯ ಮುಂದೆ ಜಮಾಯಿಸಿದ್ದರು ಎನ್ನಲಾಗಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ.
ಲಾಠಿ ಚಾರ್ಜ್ ಪರಿಣಾಮ 10ಕ್ಕೂ ಅಧಿಕ ಪ್ರತಿಭಟನಾಕಾರರಿಗೆ ತೀವ್ರ ಗಾಯಗಳಾಗಿವೆ. ಈ ಸಂಬಂಧ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಲಾಠಿ ಚಾರ್ಜ್ ಸಂದರ್ಭದಲ್ಲಿ ಎಸ್ ಐ ಸಂದೇಶ್, ವಾಮನ ಹಾಗೂ ಸಿಬ್ಬಂದಿಯಾದ ರುದ್ರಪ್ಪ ಹಾಗೂ ರೇಣುಕಾ ಅವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ
ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ | ರಮೇಶ್ ಜಾರಕಿಹೊಳಿ
ಕುಡಿತದ ಮತ್ತಿನಲ್ಲಿ ಅಪ್ರಾಪ್ತ ವಯಸ್ಸಿನ ತನ್ನ ಮಗಳನ್ನೇ ಅತ್ಯಾಚಾರ ನಡೆಸಿದ ತಂದೆ!
ಏಕಾಏಕಿ ಎದ್ದು ನಿಂತು ಅಂಬೇಡ್ಕರ್ ಫೋಟೋ ಯಾಕೆ ಹಾಕಿಲ್ಲ? ಎಂದು ಪ್ರಶ್ನಿಸಿದ ಶಾಸಕ ಅನ್ನದಾನಿ | ಗರಂ ಆದ ಸ್ಪೀಕರ್
ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು | ಲಖನ್ ಜಾರಕಿಹೊಳಿ