ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ | ಹೆಚ್.ಡಿ.ಕುಮಾರಸ್ವಾಮಿ - Mahanayaka

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ | ಹೆಚ್.ಡಿ.ಕುಮಾರಸ್ವಾಮಿ

h d kumarswamy
16/12/2021

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲು ಕೇಂದ್ರ ಸಂಪುಟ ಅನುಮೋದನೆ

ಡಾನ್ಸ್ ಮಾಡುತ್ತಿದ್ದ ಮಹಿಳಾ ಕಾರ್ಯಕರ್ತೆಯರ ಮೇಲೆ ನೋಟು ಎಸೆದ ಕಾಂಗ್ರೆಸ್ ಕಾರ್ಯಕರ್ತರು | ವಿಡಿಯೋ ವೈರಲ್

ಯುವ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ ನಿಧನ

ಮತಾಂತರ ನಿಷೇಧ ಮಸೂದೆ: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಡೆದ ಚರ್ಚೆಗಳೇನು?

ರಂಗಾಯಣದಲ್ಲಿ ರಾಜಕೀಯ ನಾಟಕ: ಠಾಣೆ ಮೆಟ್ಟಿಲೇರಿದ ರಂಗಾಯಣ-ಪ್ರಗತಿಪರರ ವಿವಾದ

ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣಿನ ಜೊತೆಗೆ ಶೇಂಗಾ ಮಿಠಾಯಿ ನೀಡಲು ನಿರ್ಧಾರ!

ಇತ್ತೀಚಿನ ಸುದ್ದಿ