ಓಮಿಕ್ರಾನ್ ಪ್ರಕರಣ: ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗುತ್ತಾ? | ತಜ್ಞರು ನೀಡಿದ ಸಲಹೆ ಏನು? - Mahanayaka
8:06 AM Wednesday 11 - December 2024

ಓಮಿಕ್ರಾನ್ ಪ್ರಕರಣ: ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗುತ್ತಾ? | ತಜ್ಞರು ನೀಡಿದ ಸಲಹೆ ಏನು?

omicron
21/12/2021

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಹೊಸ ರೂಪಾಂತರಿ ಪ್ರಕರಣಗಳು ಹೆಚ್ಚಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಿಯಂತ್ರಣ ಕೊಠಡಿಗಳಲ್ಲಿನ ಸಿಬ್ಬಂದಿಗೆ ಆಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದರು.

ನಾಗರಿಕರು ಸಹ ಎಚ್ಚರದಿಂದಿರಬೇಕು ಮತ್ತು ಅವರಿಗೆ ಯಾವುದೇ ಪ್ರಕರಣಗಳು ತಿಳಿದಿದ್ದರೆ ಅಥವಾ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ತಿಳಿಸಬೇಕು. ಪಾರ್ಟಿಗಳಲ್ಲಿ ಭಾಗವಹಿಸುವವರು ಅತ್ಯಂತ ಜಾಗರೂಕರಾಗಿರಬೇಕು ಎಂದು ತಿಳಿಸಿದರು.

ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ತರುವಂತೆ ಮತ್ತು ಜನರ ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಹಾಗೂ ರಾತ್ರಿ ಸಂಚಾರಕ್ಕೆ ಪಾಸ್ ವ್ಯವಸ್ಥೆ ಜಾರಿಗೆ ತರುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್

ಒಂದು ಇಂಚು ನೆಲವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಚಿವರ ಮಕ್ಕಳೇ ಕ್ರಿಶ್ಚಿಯನ್ ಸ್ಕೂಲ್ ನಲ್ಲಿ ಕಲಿತಿದ್ದಾರೆ, ಅಲ್ಲಿ ಮತಾಂತರಕ್ಕೆ ಬಲವಂತ ಮಾಡಿದ್ರಾ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಇತ್ತೀಚಿನ ಸುದ್ದಿ