ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್ ನಾಗರಾಜ್
ಮೈಸೂರು: ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಇಂದು ಸಂಜೆಯೊಳಗೆ ಎಂಇಎಸ್ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾಳೆ ಬೆಂಗಳೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ ಕರೆದಿದ್ದೇನೆ. ಉಗ್ರ ಹೋರಾಟದ ತೀರ್ಮಾನ ಕೈಗೊಳ್ಳುತ್ತೇವೆ. ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳದೆ ಇದ್ದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ. ನಾಳಿನ ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನು ಇಷ್ಟೆಲ್ಲಾ ಆಗಿದ್ದರೂ ರಾಜ್ಯದ ಸಂಸದರು ನಮಗೇನು ಗೊತ್ತಿಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ಎನ್ನುವ ರೀತಿ ವರ್ತನೆ ಮಾಡುತ್ತಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಡಿ.ಕೆ.ಶಿವಕುಮಾರ್‌ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟದ ಅರಿವಿಲ್ಲ: ಸಚಿವ ಈಶ್ವರಪ್ಪ
ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ: ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ಸ್ಪೀಕರ್ ಕಾಗೇರಿ ಸೂಚನೆ
ಯುವಕನ ಬರ್ಬರ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅರೆಸ್ಟ್!
ನಿಮ್ಮ ಅಪ್ಪನ ಕಾಲದಲ್ಲಿ ಅತೀ ದೊಡ್ಡ ಗುಂಪು ಹತ್ಯೆ ನಡೆದಿತ್ತು: ರಾಹುಲ್ ಗಾಂಧಿಗೆ ಬಿಜೆಪಿ ನಾಯಕರ ತಿರುಗೇಟು
“ಇದು ಪ್ರೀತಿ ಅಂತ ತಿಳಿದ ಮೇಲೆ ನೀನೆ ಎಲ್ಲಾ…” | ಅಪ್ಪುವನ್ನು ನೆನೆದು ವಿಶೇಷ ಪೋಸ್ಟ್ ಮಾಡಿದ ನಟಿ ರಮ್ಯಾ