ಬಿಜೆಪಿಯವರು ಸಂಖ್ಯಾಬಲ ಇದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್ - Mahanayaka

ಬಿಜೆಪಿಯವರು ಸಂಖ್ಯಾಬಲ ಇದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್

dk shivakumar
23/12/2021

ಬೆಳಗಾವಿ: ಮತಾಂತರ ನಿಷೇಧ ಮಾತ್ರವಲ್ಲ ಯಾವುದೇ ಕಾಯ್ದೆ ಜಾರಿಗೆ ತಂದರೂ ಅದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ ಆನ್ ರೆಕಾರ್ಡ್ ನಾನು ಇದನ್ನು ಹೇಳುತ್ತಿದ್ದೇನೆ ಎಂದರು.

ಬಿಜೆಪಿಯವರು ಸಂಖ್ಯಾಬಲ ಇದೆ ಎಂದು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ವಿಧೇಯಕವನ್ನು ಮತಕ್ಕೆ ಹಾಕಲು ಪ್ಲಾನ್ ನಡೆಯುತ್ತಿದೆ. ವಿಧಾನಸಭೆಯಲ್ಲಿ ನಮಗೆ ಅಗತ್ಯ ಸಂಖ್ಯಾಬಲವಿಲ್ಲ, ಆದರೆ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತವಿದೆ ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ವಿರುದ್ಧ ಕಿಡಿಕಾರಿದ ಡಿ.ಕೆ. ಶಿವಕುಮಾರ್, ಜೆಡಿಎಸ್ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಒಂದು. ವಿಧೇಯಕ ಮಂಡನೆ ವೇಳೆ ವಿರೋಧ ಮಾಡುತ್ತಾರೆ. ಕೊನೆ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಾಡುವುದು ಕೂಡ ಬಿಜೆಪಿಗೆ ಬೆಂಬಲಿಸಿದಂತೆ ಎಂದು ವಾಗ್ದಾಳಿ ನಡೆಸಿದರು.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ

ಮತಾಂತರ ನಿಷೇಧ ಕಾಯ್ದೆಯ ನಡುವೆಯೇ ಶುರುವಾಯ್ತು ಧರ್ಮಾಂಧರ ಉಪಟಳ: 160 ವರ್ಷ ಹಳೆಯ ಚರ್ಚ್ ಧ್ವಂಸ

ಕರ್ನಾಟಕಕ್ಕೆ ತಾಕತ್ತಿದ್ದರೆ ಎಂ​ಇಎಸ್​ ಬ್ಯಾನ್​ ಮಾಡಲಿ: ಸಂಜಯ್​ ರಾವತ್​

ಮತಾಂತರ ನಿಷೇಧ ಒಪ್ಪಿಕೊಳ್ಳಿ; ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ | ಬಿ.ಎಸ್.ಯಡಿಯೂರಪ್ಪ

ದಕ್ಷಿಣ ಆಫ್ರಿಕಾದಲ್ಲಿ ಏಕಾಏಕಿ ಇಳಿಕೆಯಾದ ಒಮಿಕ್ರಾನ್ ಪ್ರಕರಣ: ತಜ್ಞರು ಹೇಳಿದ ಅಚ್ಚರಿಯ ಸಂಗತಿ ಏನು ಗೊತ್ತಾ?

ಅರ್ಚಕರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!

ಇತ್ತೀಚಿನ ಸುದ್ದಿ