ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು, ಐದು ಮಂದಿ ಗಾಯ - Mahanayaka
1:15 AM Wednesday 11 - December 2024

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು, ಐದು ಮಂದಿ ಗಾಯ

ludhiana blast
23/12/2021

ಲೂಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಈಗಾಗಲೇ ದೌಡಾಯಿಸಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ.

ವಕೀಲರ ಮುಷ್ಕರ ನಡೆಯುತ್ತಿದ್ದ ಕಾರಣ ಘಟನೆ ನಡೆದ ಸಂದರ್ಭದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.

ಲುಧಿಯಾನದಲ್ಲಿ ನಡೆದ ಘಟನೆಯು ಬಾಂಬ್ ಸ್ಫೋಟವೇ ಅಥವಾ ಆಕಸ್ಮಿಕ ಘಟನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಮುಖಂಡರಿಂದ ಅಯೋಧ್ಯೆ ಸುತ್ತಲಿನ ಭೂಮಿ ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಸ್ವದೇಶಿ ನಿರ್ಮಿತ ‘ಪ್ರಳಯ್’ ಕ್ಷಿಪಣಿ ಮೊದಲ ಪರೀಕ್ಷೆ ಯಶಸ್ವಿ

ಪಾಕಿಸ್ತಾನ, ಅಫ್ಗಾನಿಸ್ತಾನದ 3,117 ಮಂದಿಗೆ ಭಾರತೀಯ ಪೌರತ್ವ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

ಬಿಜೆಪಿಯವರು ಸಂಖ್ಯಾಬಲ ಇದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್

ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ

ಇತ್ತೀಚಿನ ಸುದ್ದಿ