ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದುವರೆಗೂ ಉದ್ಯೋಗದಾತರಿಗೆ ಒಂದು ಸಾಮಾನ್ಯ ಸೂತ್ರದಡಿ ಪ್ರೋತ್ಸಾಹ ಮತ್ತು ಉತ್ತೇಜಕ ಭತ್ಯೆಗಳನ್ನು ಕೊಡಲಾಗುತಿತ್ತು. ಆದರೆ, ಇನ್ನು ಮುಂದೆ ಯಾವ ಸಂಸ್ಥೆ ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದೆ ಎನ್ನುವುದನ್ನು ಆಧರಿಸಿ ಪ್ರೋತ್ಸಾಹ ಕೊಡಲಾಗುತ್ತದೆ ಎಂದರು.
ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ಪ್ರತಿಯೊಬ್ಬ ವಿದ್ಯಾವಂತರಿಗೂ ಅವರಿಗೆ ಆಸಕ್ತಿ ಇರುವಂತಹ ಉದ್ಯೋಗ ದೊರಕುವಂತಾಗಬೇಕು ಎನ್ನುವುದು ಸರ್ಕಾರದ ಸಂಕಲ್ಪವಾಗಿದೆ. ಈ ಮಹತ್ವಾಕಾಂಕ್ಷೆಯಿಂದಲೇ ಸಕಲರಿಗೂ ಉದ್ಯೋಗ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.
ಎಚ್.ಪಿ.ಓಲಾ, ಎಚ್.ಸಿ.ಎಲ್. ಸೇರಿದಂತೆ ಸುಮಾರು 67 ಕಂಪೆನಿಗಳು ನೇರವಾಗಿ ಮತ್ತು 14 ಕಂಪೆನಿಗಳು ವರ್ಚುಯಲ್ ಆಗಿ ಪಾಲ್ಗೊಂಡಿದ್ದವು. ಬೆಳಗಾವಿ, ಧಾರವಾಡ, ಗದಗ ವಿಜಯಪುರ, ಬಾಗಲಕೋಟೆ ಸೇರಿದಂತೆ ಸುಮಾರು 5 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊಳ್ಳೆಗಾಲದಲ್ಲಿ ನಿಗೂಢ ವಸ್ತು ಸ್ಪೋಟ: ಮನೆ ಸಂಪೂರ್ಣ ಛಿದ್ರ
ಬೆಂಗಳೂರಲ್ಲಿ ಹವಾಲಾ ದಂಧೆ ಬೆಳಕಿಗೆ: ನಾಲ್ಕು ಮಂದಿ ಆರೋಪಿಗಳ ಬಂಧನ
ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು, ಐದು ಮಂದಿ ಗಾಯ
ಬಿಜೆಪಿ ಮುಖಂಡರಿಂದ ಅಯೋಧ್ಯೆ ಸುತ್ತಲಿನ ಭೂಮಿ ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ