6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ
ಜೈಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದ್ದು, ಕಳೆದ ಮೂರು ತಿಂಗಳಿನಲ್ಲಿ ರಾಜಸ್ಥಾನದ ಶಾಲೆಗಳಲ್ಲಿ ಒಂದರ ಹಿಂದೊಂದರಂತೆ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಇದೀಗ 11 ವರ್ಷ ವಯಸ್ಸಿನ 6ನೇ ತರಗತಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿದ್ದು, ಮಂಗಳವಾರ ಬೆಳಗ್ಗೆ ಶಾಲೆಗೆ ಹೋದ ಬಾಲಕಿ ಸಂಜೆಯಾದರೂ ಮನೆಗೆ ಹಿಂದಿರುಗಲಿಲ್ಲ. ಇದರಿಂದ ಆತಂಕಕ್ಕೊಳಗಾದ ತಾಯಿ ಶಾಲೆಗೆ ಹುಡುಕಿಕೊಂಡು ಹೋಗಿದ್ದು, ಈ ವೇಳೆ ಬೀಗ ಹಾಕಲಾಗಿದ್ದ ಶಾಲೆಯೊಳಗಿನಿಂದ ಬಾಲಕಿ ಅಳುತ್ತಿರುವ ಸದ್ದು ಕೇಳಿ ಬಂದಿದೆ.
ಬಾಗಿಲು ಮುರಿದು ನೋಡಿದಾಗ ಶಿಕ್ಷಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿರುವುದು ಕಂಡು ಬಂದಿದೆ. ಈ ವೇಳೆ ಶಿಕ್ಷಕ ಗಾಬರಿಯಿಂದ ಸ್ಥಳದಿಂದ ಓಡಿ ಹೋಗಿದ್ದು, ಬಳಿಕ ಬಾಲಕಿ ನಡೆದ ವಿಚಾರವನ್ನು ತಾಯಿಯ ಬಳಿ ಹೇಳಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
‘ಹರೀಶ ವಯಸ್ಸು 36’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ ಹಾಡು ಬಿಡುಗಡೆ
“ಆ ತಜ್ಞ ಬೋ***ಮಕ್ಕಳ ಹೆಸರು ಹೇಳುತ್ತೀರಾ?” | ಮಂಗಳೂರಿನಲ್ಲಿ ನೈಟ್, ವೀಕೆಂಡ್ ಕರ್ಫ್ಯೂಗೆ ಜನಾಕ್ರೋಶ
ಆಸ್ತಿ ಸಿಕ್ಕಿದ ಬಳಿಕ ತಾಯಿ ಬೇಡವಾದಳು: ಮಕ್ಕಳಿಗೆ ತಕ್ಕ ಪಾಠ ಕಲಿಸಿದ ತಾಯಿ
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂಗೆ ಸಚಿವರಿಂದಲೇ ವಿರೋಧ!
ಫುಡ್ ಡೆಲಿವರಿ ಬಾಯ್ ಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್: ವಿಡಿಯೋ ವೈರಲ್