ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ - Mahanayaka
3:14 AM Wednesday 11 - December 2024

ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

mekedatu
09/01/2022

ಕನಕಪುರ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪಾದಯಾತ್ರೆಗೆ ಚಾಲನೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗವಹಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ಮಧ್ಯೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಾರಥ್ಯದಲ್ಲಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು, ‘ಉಳುವ ಯೋಗಿಯ ನೋಡಲ್ಲಿ’ ಎಂಬ ಗೀತೆ ಮತ್ತು ಪಾದಯಾತ್ರೆ ಆಗಿರುವುದರಿಂದ ಹೆಜ್ಜೆ ಹಾಕುತ್ತೇವೆ ನಾವು ಎಂಬ ಗೀತೆಯನ್ನು ಕಲಾವಿದರು ಹಾಡಿದರು.

ಹಸಿರು ಶಾಲು ಕೈಯೆತ್ತಿ ಬೀಡುವ ಮೂಲಕ ರೈತರಿಗಾಗಿ, ನೀರಿಗಾಗಿ ನಮ್ಮ ಹೋರಾಟ ಎಂದು ಸಾರಿದರು. ಕಾಂಗ್ರೆಸ್ ನ ಮಹಿಳಾ ಜನಪ್ರತಿನಿಧಿಗಳು, ಕಲಾವಿದರಾದ ಸಾಧು ಕೋಕಿಲಾ, ದುನಿಯಾ ವಿಜಯ್ ಭಾಗವಹಿಸಿದ್ದರು. ಕೆಲವು ಮಠಾಧೀಶರುಗಳು ಕೂಡ ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರಗ ಸಮುದಾಯದ ಕ್ಷಮೆಯಾಚಿಸಿದ ಮುಸ್ಲಿಮ್ ವರ

ನರ್ಸ್ ಗೆಟಪ್ ನಲ್ಲಿ ಬಂದು ಮಗುವನ್ನು ಕದ್ದೊಯ್ದ ಮಹಿಳೆ

31ನೇ ವಯಸ್ಸಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ ನಟಿ: ಅಭಿಮಾನಿಗಳಿಗೆ ಶಾಕ್

ಮಾಜಿ ಸಿಎಂ ಇದ್ದ ವೇದಿಕೆಗೆ ಕೇಸರಿ ಶಾಲು ಧರಿಸಿ, ಚಾಕು ಹಿಡಿದು ನುಗ್ಗಿದ ಮಾನಸಿಕ ಅಸ್ವಸ್ಥ!

ಕೊರಗಜ್ಜನ ವೇಷ ಧರಿಸಿ ಅವಮಾನ:  ವ್ಯಾಪಕ ಖಂಡನೆ

ಇತ್ತೀಚಿನ ಸುದ್ದಿ