ಮೇಕೆದಾಟು ಪಾದಯಾತ್ರೆ ಅರ್ಧದಲ್ಲೇ ಬಿಟ್ಟು ತೆರಳಿದ ಸಿದ್ದರಾಮಯ್ಯ: ಕಾರಣ ಏನು ಗೊತ್ತಾ?
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಕಾರಣದಿಂದಾಗಿ ಪಾದಯಾತ್ರೆಯಿಂದ ಅರ್ಧದಿಂದಲೇ ವಾಪಸ್ ಆದ ಘಟನೆ ನಡೆದಿದೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಹೆಚ್ಚಿದ್ದು, ಪಾದಯಾತ್ರೆ ಬಿಟ್ಟು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯನವರಿಗೆ ಜ್ವರ ಹೆಚ್ಚಿರುವುದರಿಂದಾಗಿ ಅನಿವಾರ್ಯವಾಗಿ ವೈದ್ಯರ ಸಲಹೆಯ ಮೇರೆಗೆ ಅವರು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸುವರ್ಣ ನ್ಯೂಸ್, ಕನ್ನಡ ಪ್ರಭಕ್ಕೆ ಲೀಗಲ್ ನೋಟಿಸ್ ಕಳಿಸಿದ ಬಿಟಿವಿ!
“ಗಾಡಿ ಜೊತೆ ನನ್ ಹೆಂಡ್ತಿ ಮಕ್ಳನ್ನೂ ಸೀಝ್ ಮಾಡಿ…”
“ನಾಯಿಗಳಿಗೆ ವ್ಯಾಕ್ಸಿನ್ ಹಾಕಿಸ್ಬೇಕು ಹೋಗಲು ಬಿಡಿ ಸರ್…”