ಕೋತಿಯ ಅಂತ್ಯಸಂಸ್ಕಾರ ಮಾಡಿ, ತಿಥಿ ಊಟ ಬಡಿಸಿದ್ದಕ್ಕೆ ಜನರ ಮೇಲೆ ಕೇಸ್!
ಭೋಪಾಲ್: ಜನರು ಆಂಜನೇಯ ಎಂದು ನಂಬುತ್ತಿದ್ದ ಕೋತಿಯೊಂದು ಮೃತಪಟ್ಟಿದ್ದು, ಇದರಿಂದಾಗಿ ನೊಂದ ಗ್ರಾಮದ ಸುಮಾರು 1,500ಕ್ಕೂ ಅಧಿಕ ಮಂದಿ ಸೇರಿಕೊಂಡು ಕೋತಿಯ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ದಾಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರು, ಕೋತಿಯ ಅಂತ್ಯಸಂಸ್ಕಾರ ಮಾಡಿರುವುದೇ ಅಲ್ಲದೇ ಕೋತಿಯ ತಿಥಿ ಕೂಡ ಮಾಡಿ, ಅನ್ನ ಸಂತರ್ಪಣೆ ನಡೆಸಿದ್ದಾರೆ. ಊರಿನ ಭಕ್ತರನ್ನೆಲ್ಲ ಕರೆದು ಅನ್ನದಾನ ಮಾಡುವ ಮೂಲಕ ಕೋತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಸದ್ಯ ಕೊವಿಡ್ ವೈರಸ್ 3ನೇ ಅಲೆಯ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಕೊವಿಡ್ ನಿಯಮಗಳು ಜಾರಿಯಲ್ಲಿದ್ದು, ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಈ ನಡುವೆ ಕೋತಿಯ ಅಂತ್ಯಕ್ರಿಯೆ ಮತ್ತು ತಿಥಿ ಕಾರ್ಯದಲ್ಲಿ ಭಾಗವಹಿಸಿದ್ದ 1,500 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದ್ದು, ಇದರ ನೇತೃತ್ವ ವಹಿಸಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಪ್ರಕರಣದಲ್ಲಿ ಇಬ್ಬರನ್ನು ಅರೆಸ್ಟ್ ಮಾಡುತ್ತಿದ್ದಂತೆಯೇ ಭೀತಿಗೊಳಗಾಗಿರುವ ಇತರರು ಪೊಲೀಸರಿಂದ ತಪ್ಪಿಸಿಕೊಳ್ಳಲು ಇದೀಗ ಬಚ್ಚಿಟ್ಟುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿ ತೊರೆದು 24 ಗಂಟೆಗಳಲ್ಲೇ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್!
“ಲೋನ್ ಆ್ಯಪ್ ನಿಂದ ಸಾಲ ಪಡೆದು ಮಾನ, ಪ್ರಾಣ ಕಳೆದುಕೊಳ್ಳಬೇಡಿ”