ಯುವಕನ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಹಾಸನ: ಯುವಕನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರವೀಣ್ ಎಂಬಾತ ಪ್ರಮುಖ ಆರೋಪಿಯಾಗಿದ್ದಾನೆ. ಜ. 11ರಂದು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿತ್ತು. ಈ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿತ್ತು. ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಬಿಜಾಪುರ ಮೂಲದ ಮೇಘರಾಜ್ ಎಂಬಾತನನ್ನು ಜನನಿಬಿಡ ಪ್ರದೇಶದಲ್ಲೇ ಬೆತ್ತಲೆಗೊಳಿಸಿ ಎಳೆದಾಡುವ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ಘಟನೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದರು.
ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಪ್ರವೀಣ್‌ಗೌಡ ಸೇರಿದಂತೆ ಕೆಲವರ ಮೇಲೆ ದೂರು ದಾಖಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ
ಬೆಂಗಳೂರು ಮಾಲ್ ನಲ್ಲಿ ಅಗ್ನಿ ಅವಘಡ
ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!