ಬಿಜೆಪಿ ವಿಕೆಟ್‌ಗಳು ಪತನ: ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರಲ್ಲ; ಅಖಿಲೇಶ್ ಯಾದವ್ ಲೇವಡಿ
ಲಖನೌ: ಬಿಜೆಪಿ ವಿಕೆಟ್‌ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ.
ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒಬ್ಬರಂತೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್‌ಪಿ) ಸೇರುತ್ತಿದ್ದಾರೆ. ಇದನ್ನೇ ಉಲ್ಲೇಖ ಮಾಡಿರುವ ಅಖಿಲೇಶ್ ಯಾದವ್, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ ಎಂದು ಕುಟುಕಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ ’80 ವರ್ಸಸ್ 20 ಸ್ಪರ್ಧೆ’ (ಹಿಂದೂ ವರ್ಸಸ್ ಮುಸ್ಲಿಂ) ಹೇಳಿಕೆಗೆ ತಿರುಗೇಟು ನೀಡಿರುವ ಅಖಿಲೇಶ್, ಆದಿತ್ಯನಾಥ್ ಗಣಿತ ಶಿಕ್ಷಕರಾಗಬೇಕು ಎಂದು ಹೇಳಿದರು.
ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಇತರೆ ನಾಯಕರ ಸೇರ್ಪಡೆಯೊಂದಿಗೆ ಬಿಜೆಪಿ ಈಗ ಉಳಿದಿರುವ ಶೇ. 20 ಕೂಡ ಕಳೆದುಕೊಳ್ಳಲಿದೆ. ಬಾಬಾ ಸಿಎಂ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ದೆಹಲಿಯಿಂದ ಯಾರೇ ಬಂದರೂ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದಿಲ್ಲ ಎಂದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇನ್ನೂ ಐವರು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿದ್ದಾರೆ.
ವರ್ಚುವಲ್ ಆಗಿ ಕಾರ್ಯಕ್ರಮ ನಡೆದರೂ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿ ಸಮೀಪದಲ್ಲಿ 2,000ಕ್ಕೂ ಹೆಚ್ಚು ಮಂದಿ ಬೆಂಬಲಿಗರು ಜಮಾಯಿಸಿದ್ದರು. ಇದರಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜಲ್ಲಿಕಟ್ಟು ಸ್ಪರ್ಧೆ: ಓರ್ವ ಸಾವು, 80 ಮಂದಿಗೆ ಗಾಯ
ಯುವಕನ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ
ಬೆಂಗಳೂರು ಮಾಲ್ ನಲ್ಲಿ ಅಗ್ನಿ ಅವಘಡ
ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!