ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಕಂದಮ್ಮಗಳು ಸಾವು
ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ಹಾಗೂ ಲರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ (15 ತಿಂಗಳು) ಮೃತ ಕಂದಮ್ಮಗಳೆಂದು ತಿಳಿದುಬಂದಿದೆ.
ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಟ್ಟು 17 ಮಕ್ಕಳಿಗೆ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು. ಆ ಬಳಿಕ ನಾಲ್ಕು ಮಕ್ಕಳು ಅಸ್ವಸ್ಥರಾಗಿದ್ದು, ಮೃತಪಟ್ಟಿದ್ದಾರೆ. ಇನ್ನೊಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಾತ್ ರೂಮ್ ನಲ್ಲೇ ತಾಯಿ, ಮಗು ದಾರುಣ ಸಾವು | ಸ್ನಾನದ ಕೋಣೆಯಲ್ಲಿ ದುರಂತ ಸಾವು
ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಗುಂಡು ಹಾರಿಸಿ ಬರ್ಬರ ಹತ್ಯೆ
ಭಾರತದ ಕೃಷಿ ಅಪಾಯಕಾರಿ ಭವಿಷ್ಯದತ್ತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಪಾಕ್ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ಅಫ್ಗಾನ್ ಗೆ ಬಂದಿಲ್ಲ: ಹಮೀದ್ ಕರ್ಜೈ