ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಹೈಕೋಟ್‌ನಿಂದ ಆರೋಪಿಯ ಜಾಮೀನು ಅರ್ಜಿ ವಜಾ
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಎಸ್ ಡಿಪಿಐನ ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್ ಅಲಿಯಾಸ್ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠವು ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ದೋಷಾರೋಪ ಪಟ್ಟಿ ಅನುಸಾರ ಅರ್ಜಿದಾರರಾದ ಇಮ್ರಾನ್ ಅಹ್ಮದ್ ಅವರು ಗಲಭೆ ನಡೆಯುವ ಮೊದಲು ಸಭೆಯಲ್ಲಿ ಭಾಗಿಯಾಗಿದ್ದರು ಎಂಬುದು ಸ್ಪಷ್ಟವಾಗಿದೆ. ಅಲ್ಲದೆ, ಅರ್ಜಿದಾರರು ಎಸ್ ಡಿಪಿಐ ಅಧ್ಯಕ್ಷರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಬೆದರಿಕೆ ಹಾಕುವ ಮೂಲಕ ವಿಚಾರಣೆಗೆ ಅಡ್ಡಿಪಡಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅರ್ಜಿದಾರರ ವಿರುದ್ಧದ ಆರೋಪವು ಪ್ರಾಥಮಿಕವಾಗಿ ಸಾಬೀತಾಗಿದೆ. ನಂಬಲು ಕೂಡ ಸೂಕ್ತ ಆಧಾರಗಳಿವೆ. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ಹೊರಗಡೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚುವಾಗ ಅವರು ಭಾಗವಹಿಸಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಇರುವ ಅಂಶಗಳು ಸೂಚಿಸುತ್ತವೆ. ಹೀಗಾಗಿ, ಇಮ್ರಾನ್ ಅಹ್ಮದ್ ಜಾಮೀನಿನ ಮೇಲೆ ಬಿಡುಗಡೆಯಾಗುವ ಅರ್ಹತೆಯನ್ನು ಹೊಂದಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಹಾರ: 4 ಕಾಲು, 4 ಕೈಗಳಿರುವ ವಿಚಿತ್ರ ಮಗು ಜನನ; ಕಂಗಾಲಾದ ಕುಟುಂಬಸ್ಥರು
ಶ್ರೀರಂಗಪಟ್ಟಣ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ: ರಿಷಿಕುಮಾರ್ ಸ್ವಾಮೀಜಿ ಬಂಧನ
ಜ.26ರಿಂದ 12 ಜಿಲ್ಲೆಗಳಲ್ಲಿ ‘ಗ್ರಾಮ ಒನ್ ಯೋಜನೆ’ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ
3 ಮಕ್ಕಳ ಸಾವು ಪ್ರಕರಣ: ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ; ಅಧಿಕಾರಿಗಳಿಂದ ಮಾಹಿತಿ