ಐಎನ್ ಎಸ್ ರಣವೀರ್ ಯುದ್ಧನೌಕೆಯಲ್ಲಿ ಸ್ಫೋಟ: ಮೂವರು ನೌಕಾ ಸಿಬ್ಬಂದಿ ಸಾವು
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಮುಂಬೈನ ನೌಕಾನೆಲೆಯಲ್ಲಿ ನಡೆದ ಘಟನೆಯಲ್ಲಿ, ಐಎನ್‌ಎಸ್ ರಣವೀರ್‌ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಯುದ್ಧನೌಕೆಯ ಕಂಪಾರ್ಟ್ಮೆಂಟ್ ಒಂದರಲ್ಲಿ ಸ್ಫೋಟ ಸಂಭವಿಸಿದೆ.
ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಪ್ರಕಟಣೆ ವಿವರಿಸಿದೆ.
ನೌಕೆಯಲ್ಲಿದ್ದ ಇತರ ಸಿಬ್ಬಂದಿ ತ್ವರಿತವಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ. ಸ್ಫೋಟಕ್ಕೆ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊವಿಡ್ ಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿ
ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ: 40 ಮಂದಿಯ ವಿರುದ್ಧ ಕೇಸ್!
ನರಗುಂದದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಪ್ರಕರಣ: ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಹೈಕೋಟ್‌ನಿಂದ ಆರೋಪಿಯ ಜಾಮೀನು ಅರ್ಜಿ ವಜಾ
ಶ್ರೀರಂಗಪಟ್ಟಣ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ: ರಿಷಿಕುಮಾರ್ ಸ್ವಾಮೀಜಿ ಬಂಧನ