ಅಮೆರಿಕಕ್ಕೆ ವಿಮಾನಯಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ
ನವದೆಹಲಿ: ಬುಧವಾರ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿರುವ ಕೆಲವು ವಿಮಾನ ಸೇವೆಗಳನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ.
ಪ್ರಯಾಣಿಕರಿಗೆ ಈ ಮೂಲಕ ಏರ್ ಇಂಡಿಯಾ ಮಾಹಿತಿ ನೀಡಿದ್ದು, ದೆಹಲಿಯಿಂದ ಅಮೆರಿಕದ ಜಾನ್ ಎಫ್ ಕೆನಡಿ ಇಂಟರ್ನ್ಯಾಷನಲ್ ಏರ್ಫೋರ್ಟ್, ದೆಹಲಿಯಿಂದ ಅಮೆರಿಕದ ಓಹಾರೆ ಇಂಟರ್ ನ್ಯಾಷನಲ್ ಏರ್ಪೋರ್ಟ್, ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋ ಇಂಟರ್ನ್ಯಾಷನಲ್ ಏರ್ಪೋರ್ಟ್ ಮತ್ತು ಮುಂಬೈನಿಂದ ಅಮೆರಿಕದ ನೆವಾರ್ಕ್ ಇಂಟರ್ನ್ಯಾಷನಲ್ ಏರ್ಪೋರ್ಟ್ಗೆ ತೆರಳಲಿರುವ ಮತ್ತು ಅಲ್ಲಿಂದ ಬರಲಿರುವ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಮತ್ತೊಂದು ಟ್ವೀಟ್ನಲ್ಲಿ ದೆಹಲಿಯಿಂದ ವಾಷಿಂಗ್ಟನ್ ಡಿಸಿ ಹೊರಡಲಿರುವ AI103 ವಿಮಾನ ನಿಗದಿಯಂತೆ ಕಾರ್ಯಾಚರಣೆ ಮಾಡಲಿದೆ ಎಂದು ಸ್ಪಷ್ಟನೆ ನೀಡಲಾಗಿದೆ. ಅಮೆರಿಕದ ವಿವಿಧ ಸ್ಥಳಗಳಿಗೆ ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
ವಿಮಾನಯಾನ ಸಂಚಾರಕ್ಕೆ ರದ್ದುಗೊಳಿಸಲು ಕಾರಣ: ಅಮೆರಿಕದಲ್ಲಿ 5ಜಿ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವ ಕಾರಣದಿಂದ ವಿಮಾನಯಾನ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಏರ್ ಇಂಡಿಯಾ ಟ್ವೀಟ್ನಲ್ಲಿ ಹೇಳಿದೆ. ಮೂಲಗಳ ಪ್ರಕಾರ 5ಜಿ ತಂತ್ರಜ್ಞಾನ ಅಳವಡಿಕೆಯಿಂದಾಗಿ ವಿಮಾನದಲ್ಲಿನ ಕೆಲವು ಉಪಕರಣಗಳು ಸರಿಯಾಗಿ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ ಎಂದು ಹೇಳಲಾಗುತ್ತಿದ್ದು, ಇದೇ ಕಾರಣದಿಂದ ಏರ್ ಇಂಡಿಯಾ ತಮ್ಮ ವಿಮಾನಯಾನ ಸೇವೆಯನ್ನು ಅಮೆರಿಕಕ್ಕೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಇಎಂಎಲ್ ಖಾಸಗೀಕರಣ ಪ್ರಶ್ನಿಸಿ ಪಿಐಎಲ್ : ಕರ್ನಾಟಕ ಹೈಕೋರ್ಟ್‌ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್
ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ಶುಕ್ರವಾರ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರು: ತ್ಯಾಜ್ಯ ವಿಲೇವಾರಿ ವಿಳಂಬ; ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ
ಕೋವಿಡ್ ಲಸಿಕೆ ಸಾವು ತಪ್ಪಿಸುತ್ತದೆಯೇ ಹೊರತು ಸೋಂಕು ಬರುವುದನ್ನಲ್ಲ: ಸಚಿವ ಡಾ. ಸುಧಾಕರ್
ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಅವರ ಮೃತದೇಹ ಗೋಣಿಚೀಲದಲ್ಲಿ ಪತ್ತೆ