2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಕಲ್ಲಿನಾಥ ಸ್ವಾಮೀಜಿ ಭವಿಷ್ಯ
ಬಾಗಲಕೋಟೆ: 2023ರಲ್ಲಿ ದೇವಿ ಶಾಪದಿಂದ ಬಿಜೆಪಿ ಧೂಳೀಪಟ ಆಗಲಿದೆ. ದೇವರ ಹಾಗೂ ರೈತರ ಶಾಪದಿಂದ ಬಿಜೆಪಿ ಹೋಗುವ ಕಾಲ ಬರಬಹುದು ಎಂದು ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬಾದಾಮಿ ಶ್ರೀ ಬನಶಂಕರಿ ಜಾತ್ರೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾದಾಮಿ ಶ್ರೀ ಬನಶಂಕರಿ ದೇವಿ ಜಾತ್ರೆ ಶತಮಾನದ ಇತಿಹಾಸ ಹೊಂದಿದೆ. ಭಾರತ ದೇಶ ನಂಬಿಕೆ ಮೇಲೆ, ಧಾರ್ಮಿಕ ಭಾವನೆ ಮೇಲೆ ಪರಂಪರೆಯನ್ನ ಹೊಂದಿರುವ ರಾಷ್ಟ್ರವಾಗಿದೆ. ಎರಡು ವರ್ಷಗಳಿಂದ ಕೋವಿಡ್ ನೆಪ ಹೇಳಿ, ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳು ಮತ್ತು ರೈತರ ಮೇಲೆ ಶೋಚನೀಯ ಪರಿಸ್ಥಿತಿ ನಡೆಸಿದೆ ಎಂದು ಆರೋಪಿಸಿದರು.
ಕಾನೂನು ಕಟ್ಟಳೆ ಮಾಡಿ ರೈತರನ್ನ ಮತ್ತು ಧಾರ್ಮಿಕ ಕಾರ್ಯಕ್ರಮವನ್ನ ತುಳಿಯುತ್ತಿದ್ದಾರೆ. ಧಾರ್ಮಿಕ ಆಚರಣೆ ಮಾಡಿ ದೇವಿ ಹತ್ರ ಕೇಳಿದರೆ ಸಂಪೂರ್ಣ ಕೋವಿಡ್ ನಿಯಂತ್ರಣ ಮಾಡುವ ಶಕ್ತಿ ದೇವಿಯಲ್ಲಿದೆ. ಬನಶಂಕರಿ ಜಾತ್ರೆಯಲ್ಲಿ ಭಕ್ತರನ್ನ ಹೊಡೆಯುವುದನ್ನು ನೋಡಿದರೆ, ದೇವಿ ಶಾಪದಿಂದ 2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಆಗಲಿದೆ.ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ. ನೂರಕ್ಕೆ ನೂರಾವೊಂದು ಶೇಕಡ ಹಿಂದೂಗಳ ಶಾಪ ಅವರಿಗೆ ತಟ್ಟುತ್ತೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಜಯಪುರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಶಾಸಕರು – ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ
ಅಮೆರಿಕಕ್ಕೆ ವಿಮಾನಯಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ
ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ಶುಕ್ರವಾರ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ
ಕೋವಿಡ್ ಲಸಿಕೆ ಸಾವು ತಪ್ಪಿಸುತ್ತದೆಯೇ ಹೊರತು ಸೋಂಕು ಬರುವುದನ್ನಲ್ಲ: ಸಚಿವ ಡಾ. ಸುಧಾಕರ್
ಭಾರೀ ಪ್ರಮಾಣದ ಹಿಮಕುಸಿತ; ಭಾರತೀಯ ಸೇನೆಯಿಂದ 30 ನಾಗರಿಕರ ರಕ್ಷಣೆ