ಮಂಗಳೂರು: ತ್ಯಾಜ್ಯ ವಿಲೇವಾರಿ ವಿಳಂಬ; ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದೆ.
ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಮಂಗಳೂರು ನಗರಪಾಲಿಕೆ ಪರ ಎಎಜಿ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿಗೆ ಗುತ್ತಿಗೆದಾರನ್ನು ಗುರುತಿಸಲಾಗಿದ್ದು, ಮಾತುಕತೆ ಸಹ ನಡೆದಿದೆ. ಟೆಂಡರ್ ಪ್ರಕ್ರಿಯೆಯಷ್ಟೇ ಬಾಕಿ ಉಳಿದಿದೆ. 50 ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್ಗೆ ಹಣಕಾಸು ಇಲಾಖೆ ಅನುಮೋದನೆ ಬೇಕಾಗಿದ್ದು, ಈ ಸಂಬಂಧ ಕಡತವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯುತ್ತಲೇ ಟೆಂಡರ್ ಪೂರ್ಣಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೋವಿಡ್ ಲಸಿಕೆ ಸಾವು ತಪ್ಪಿಸುತ್ತದೆಯೇ ಹೊರತು ಸೋಂಕು ಬರುವುದನ್ನಲ್ಲ: ಸಚಿವ ಡಾ. ಸುಧಾಕರ್
ಭಾರೀ ಪ್ರಮಾಣದ ಹಿಮಕುಸಿತ; ಭಾರತೀಯ ಸೇನೆಯಿಂದ 30 ನಾಗರಿಕರ ರಕ್ಷಣೆ
ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಅವರ ಮೃತದೇಹ ಗೋಣಿಚೀಲದಲ್ಲಿ ಪತ್ತೆ
ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ: 40 ಮಂದಿಯ ವಿರುದ್ಧ ಕೇಸ್!
ಐಎನ್ ಎಸ್ ರಣವೀರ್ ಯುದ್ಧನೌಕೆಯಲ್ಲಿ ಸ್ಫೋಟ: ಮೂವರು ನೌಕಾ ಸಿಬ್ಬಂದಿ ಸಾವು