ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ - Mahanayaka
10:55 AM Friday 20 - September 2024

ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ

arrest
21/01/2022

ಬೆಂಗಳೂರು: ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ವಂಚಿಸುತ್ತಿದ್ದ ಅರೋಪಿಯನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ.

ಈರಣ್ಣ ಅಲಿಯಾಸ್​​ ರಾಜಣ್ಣ ಬಂಧಿತ ಆರೋಪಿ. ಕೇವಲ ಉತ್ತರ ಕರ್ನಾಟಕದ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈರಣ್ಣ ನಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಎಂ.ಎಸ್. ಬಿಲ್ಡಿಂಗ್ ಬಳಿಯಲ್ಲಿರೋ ಪಾರ್ಕ್​ಗೆ ಕರೆದೊಯ್ದು ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಆಸೆ ತೋರಿಸುತ್ತಿದ್ದ. ಅಭ್ಯರ್ಥಿಗಳಿಗೆ ಫೇಕ್​ ಮಾರ್ಕ್ಸ್​ಕಾರ್ಡ್​ ಮಾಡಿ ಕೊಟ್ಟು ವಿಲೇಜ್ ಅಕೌಂಟೆಂಟ್ ಹುದ್ದೆಗೆ ಅರ್ಜಿಗೆ ಹಾಕಿಸುತ್ತಿದ್ದ ಎನ್ನಲಾಗಿದೆ.

ಈ ಎಲ್ಲಾ ವಿಚಾರಗಳ ಮಧ್ಯೆ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ಬಳಿಕ ಕೆಲಸ ಕೊಡಿಸದೆ ವಂಚಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ವಿಧಾನಸೌಧ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉತ್ತರ ಪ್ರದೇಶ: ತಮ್ಮದೇ ಕ್ಷೇತ್ರದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು

ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯುವಕನ ಪತ್ತೆಗೆ ಪಿಎಲ್‌ಎ ನೆರವು ಕೋರಿದ ಭಾರತೀಯ ಸೇನೆ

ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಮತ್ತೊಮ್ಮೆ ಅರೆಸ್ಟ್!

ಮಂಗಳೂರು: ಮರುವಾಯಿ ಮೀನಿನ ಪದಾರ್ಥ ತಿಂದು ಹಲವರು ಅಸ್ವಸ್ಥ

ವೈದ್ಯಕೀಯ ಕೋರ್ಸ್‌: ಒಬಿಸಿಗಳಿಗೆ ಶೇ. 27, ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಗೆ ಸುಪ್ರೀಂಕೋರ್ಟ್‌ ಅನುಮತಿ

ಇತ್ತೀಚಿನ ಸುದ್ದಿ