ಲಷ್ಕರ್-ಎ-ತೊಯ್ಬಾ ಉಗ್ರನ ಸೆರೆ
ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿ, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ನಡೆದಿದೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಮಂದರ್ ಪ್ರದೇಶದ ನಿವಾಸಿಯಾದ ಜಹಾಂಗೀರ್ ಅಹ್ಮದ್ ನೈಕೂ ಬಂಧಿತ ಉಗ್ರ. ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಎಲ್‌ಇಟಿಯ ಉಗ್ರ ಸೆರೆಸಿಕ್ಕಿದ್ದಾನೆ. ಈತನಿಂದ ಒಂದು ಪಿಸ್ತೂಲ್, 16 ಪಿಸ್ತೂಲ್ ಗುಂಡುಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಕ್ರಾ ಬಳಿ ಭಾರೀ ಸ್ಫೋಟ: 17 ಸಾವು, 59 ಮಂದಿಗೆ ಗಾಯ
ಮಹಿಳೆಯ ಕೊಲೆ ಪ್ರಕರಣ; ಬಿಜೆಪಿ ಕೌನ್ಸಿಲರ್ ಬಂಧನ
ಹಾಡಹಗಲೇ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ
ಗರ್ಭಿಣಿ ಅರಣ್ಯ ರಕ್ಷಕಿ ಮೇಲೆ ದಂಪತಿಯಿಂದ ಥಳಿತ