ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಸಂಭವಿಸಿದೆ.
ಮೆಜೆಸ್ಟಿಕ್ ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಂಟಿಸಿ ಚಾಲಕ ಬಸ್ ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನಾಸ್ಥಳಕ್ಕೆ ವಿವಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲಾಹೋರ್ ಮಾರುಕಟ್ಟೆಯಲ್ಲಿ ಭಾರೀ ಸ್ಫೋಟ; 3 ಸಾವು, 20 ಮಂದಿಗೆ ಗಾಯ
ಗರ್ಭಿಣಿ ಅರಣ್ಯ ರಕ್ಷಕಿ ಮೇಲೆ ದಂಪತಿಯಿಂದ ಥಳಿತ
2022ರ ಆಸ್ಕರ್ ಪ್ರಶಸ್ತಿಗೆ ತಮಿಳು ಚಿತ್ರ ‘ಜೈ ಭೀಮ್’ ಆಯ್ಕೆ
ಖ್ಯಾತ ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು
ಕೋವಿಶೀಲ್ಡ್, ಕೋವ್ಯಾಕ್ಸಿನ್ ಮುಕ್ತ ಮಾರುಕಟ್ಟೆಗೆ ಡಿಜಿಸಿಐ ಶಿಫಾರಸು