ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ: ಸಚಿವ ವಿ.ಸುನಿಲ್ ಕುಮಾರ್ - Mahanayaka
8:19 AM Thursday 12 - December 2024

ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ: ಸಚಿವ ವಿ.ಸುನಿಲ್ ಕುಮಾರ್

power
22/01/2022

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ. ವಿದ್ಯುತ್ ಮಾರ್ಗ ಬದಲಾವಣೆ, ಹೊಸ ಉಪ ವಿಭಾಗ ನಿರ್ಮಾಣ ಸೇರಿದಂತೆ ಅಭಿವೃದ್ದಿ ಕಾಮಗಾರಿಗಳ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದು ಅನಿವಾರ್ಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ವಿಧಾನಸೌ ಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೆಲವು ಯೋಜನೆಗಳನ್ನು ಕೈ ಗೆತ್ತಿಕೊಂಡಿದ್ದು, ಅದನ್ನು ಪೂರೈಸಬೇಕಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಾಲ್ಕು ಸಾವಿರ ಕೋಟಿ ರೂ. ಸೇರಿದಂತೆ ಬೆಂಗಳೂರು ಜಲ ಮಂಡಳಿ, ನಗರಾಭಿವೃದ್ಧಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ 12 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ. ಇಲಾಖಾವಾರು ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ವಿದ್ಯುತ್ ಬಾಕಿ ಪಾವತಿಗೆ ಪ್ರಯತ್ನಿಸಲಾಗುವುದು ಎಂದರು.

ರಾಜ್ಯದಲ್ಲಿ ಸದ್ಯಕ್ಕೆ ಕಲ್ಲಿದ್ದಲು ಸಮಸ್ಯೆ ಇಲ್ಲ. ವಿದ್ಯುತ್ ಬಳಕೆ ಪ್ರಮಾಣ 15,000 ಮೆಗಾವ್ಯಾಟ್‍ ನಷ್ಟಿದ್ದು, ಈ ಬಾರಿ ಮಳೆ ಚೆನ್ನಾಗಿ ಆಗಿರುವುದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದಿಲ್ಲ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ಮತ್ತೆ ಪ್ರಕರಣ ದಾಖಲು

ಭಾರತ ಫುಟ್ಬಾಲ್ ತಂಡದ ದಿಗ್ಗಜ ಆಟಗಾರ ನಿಧನ

ಸಿಎಂ ಹತ್ಯೆ ಮಾಡುವುದಾಗಿ ಬೆದರಿಕೆ: ನಟ ಪವನ್ ಕಲ್ಯಾಣ್ ಅಭಿಮಾನಿ ಬಂಧನ

ಜ. 23ರಂದು ಸಂಪೂರ್ಣ ಲಾಕ್‌ ಡೌನ್ ; ಸಿಎಂ ಸ್ಟಾಲಿನ್

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

 

ಇತ್ತೀಚಿನ ಸುದ್ದಿ