ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ - Mahanayaka
11:00 AM Thursday 12 - December 2024

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

rape
22/01/2022

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಬಸ್​ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತೆಯನ್ನು ಯುವಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಜ. 15ರಂದು ಬಾಲಕಿ ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರು, ನಾವು ನಿಮ್ಮ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿಕೊಂಡಿದ್ದು, ಈ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಬಾಲಕಿ ಈ ಬಗ್ಗೆ ಪೋಷಕರ ಬಳಿ ಬಾಯ್ಬಿಟ್ಟಿರಲಿಲ್ಲ.

ಇದಾದ ಬಳಿಕ ಯುವಕರು ಮತ್ತೆ ತಮ್ಮ ಜೊತೆ ಬರುವಂತೆ ಬಾಲಕಿಗೆ ಒತ್ತಾಯಿಸಿದ್ದಾರೆ. ಆದರೆ, ಬಾಲಕಿ ಪುನಃ ಕರೆದಾಗ ನಿರಾಕರಿಸಿದ್ದಾಳೆ. ಬಾಲಕಿ ನಿರಾಕರಿಸಿದ್ದಕ್ಕೆ ಬೇರೆಯವರ ಮೊಬೈಲ್​ಗೆ ಅತ್ಯಾಚಾರದ ವಿಡಿಯೋ ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಜ. 21ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ.

ಈ ಸಂಬಂಧ ಆರೋಪಿಗಳಾದ ಸಂತೋಷ್  (24) ಹಾಗೂ ಸುನೀಲ್  (26)ನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಯುವಕರು ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬಂದ ವೇಳೆ ಪರಿಚಯವಾಗಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಫಿಲಿಪ್ಪೀನ್ಸ್​​​: 6.5 ತೀವ್ರತೆಯ ಭೂಕಂಪ

20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಜೀವ ದಹನ, 17ಕ್ಕೂ ಹೆಚ್ಚು ಮಂದಿಗೆ ಗಾಯ

ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲವೇ ಕಾರಣ:  ಕುಟುಂಬಸ್ಥರಿಂದ ಆರೋಪ

ಲಡಾಖ್​- ಕಾರ್ಗಿಲ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ

ಧಾರ್ಮಿಕ ಸಂಕೇತಗಳೂ ಮತಾಧಾರಿತ ಅಸ್ಮಿತೆಯೂ

 

ಇತ್ತೀಚಿನ ಸುದ್ದಿ