ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ?: ಶಾಸಕ ರೇಣುಕಾಚಾರ್ಯ - Mahanayaka
1:14 PM Thursday 12 - December 2024

ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ?: ಶಾಸಕ ರೇಣುಕಾಚಾರ್ಯ

renukacharyas
24/01/2022

ದಾವಣಗೆರೆ: ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ತಮ್ಮ ಹಾಗೂ ಬಸವಗೌಡ ಪಾಟೀಲ್ ಯತ್ನಾಳ್ ಪಾತ್ರ ಸಾಕಷ್ಟಿದೆ, ಹೀಗಿರುವಾಗ ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ, ತಮ್ಮನ್ನೇಕೆ ಸಂಪುಟಕ್ಕೆ ಸೇರಿಸಬಾರದು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ, ಪುನರ್ ಚನೆ ಮಾತುಗಳು, ಬಹಿರಂಗ ಹೇಳಿಕೆಗಳು, ಸಮಾನ ಮನಸ್ಕರ ಸಭೆಗಳು, ಅಸಮಾಧಾನಗಳು ಜೋರಾಗಿವೆ. ಸಿಎಂ ಕಾರ್ಯದರ್ಶಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ತಾವು ಪ್ರಬಲ ಸಚಿವಾಕಾಂಕ್ಷಿ ಎಂಬುದನ್ನು ಹೇಳಿಕೊಂಡಿದ್ದಾರೆ.

ನಮ್ಮ ಕ್ಷೇತ್ರದ ಸಮಸ್ಯೆಗಳು, ಆಗಬೇಕಾದ ಕೆಲಸಗಳ ಬಗ್ಗೆ ಹೇಳೋಣವೆಂದರೆ ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟದಲ್ಲಿ ಈಗ 4 ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ರಾಜೀನಾಮೆ ನೀಡಿ ಹೊಸಬರಿಗೆ ಅವಕಾಶ ನೀಡಲಿ. ಮಾರ್ಚ್‌ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ ಎಂದು ಸವಾಲು ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯೆಮೆನ್ ಬಂಡುಕೋರರ ದಾಳಿ: ಇಬ್ಬರು ಭಾರತೀಯರ ಸಾವು

ಮಕ್ಕಳನ್ನು ಹೆದರಿಸಲು ಗುಂಡು ಹಾರಿಸಿದ ಸಚಿವರ ಪುತ್ರನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಮತ್ತೋರ್ವ ಬಿಜೆಪಿ ಶಾಸಕ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ

ಸಾವಿನಲ್ಲೂ ಒಂದಾದ ತಾಯಿ – ಮಗ

 

ಇತ್ತೀಚಿನ ಸುದ್ದಿ