ಹಿಂಸಾರೂಪಕ್ಕೆ ತಿರುಗಿದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿಕೆ - Mahanayaka
12:12 PM Thursday 12 - December 2024

ಹಿಂಸಾರೂಪಕ್ಕೆ ತಿರುಗಿದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿಕೆ

bihr
27/01/2022

ಬಿಹಾರ: ರೈಲ್ವೆ ನೇಮಕಾತಿ ಮಂಡಳಿಯ ನಾನ್‌ ಟೆಕ್ನಿಕಲ್‌ ಪಾಪ್ಯುಲರ್‌ ಕೆಟಗರಿ (ಎನ್‌ಟಿಪಿಸಿ) ಹುದ್ದೆಗಳಿಗೆ ನಡೆಸಲು ಯೋಜಿಸಿದ್ದ ಎರಡು ಹಂತದ ಪರೀಕ್ಷಾ ನೀತಿ ವಿರುದ್ಧದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಕಾರಣ, ರೈಲ್ವೆ ಸಚಿವಾಲಯವು ಎನ್​ಟಿಪಿಸಿ ಹಾಗೂ ಮೊದಲ ಹಂತದ ಪರೀಕ್ಷೆಗಳನ್ನು ಮುಂದೂಡಿದೆ.

ಸಚಿವಾಲಯವು ನೊಟೀಸ್ ಹೊರಡಿಸಿದ್ದು, ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಬಗ್ಗೆ ಅರಿತುಕೊಳ್ಳಲು ಉನ್ನತ ಸಮಿತಿ ರಚಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅಹವಾಲು ಮತ್ತು ಸಲಹೆಗಳನ್ನು ಸಮಿತಿಗೆ rrbcommittee@railnet.gov.inನಲ್ಲಿ ಫೆ. 16ರವರೆಗೆ ಸಲ್ಲಿಸಬಹುದು ಎಂದು ತಿಳಿಸಿದೆ.

ರೈಲ್ವೆ ನೇಮಕಾತಿ ಮಂಡಳಿ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಉದ್ರಿಕ್ತ ಉದ್ಯೋಗ ಆಕಾಂಕ್ಷಿಗಳು ಗಯಾದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ್ದರು. ಅಲ್ಲದೆ ಚಲಿಸುತ್ತಿದ್ದ ರೈಲು ಹಾಗೂ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಪ್ರಯಾಗ್‌ರಾಜ್‌ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಸುಮಾರು ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪರೀಕ್ಷೆಗಳನ್ನು ಎರಡು ಹಂತಗಳಲ್ಲಿ ನಡೆಸುವ ರೈಲ್ವೆ ಇಲಾಖೆಯ ನಿರ್ಧಾರವನ್ನು ಪ್ರತಿಭಟನಾಕಾರರು ವಿರೋಧಿಸುತ್ತಿದ್ದಾರೆ. ಅಂತಿಮ ಆಯ್ಕೆಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ)ಯನ್ನು ಎದುರಿಸಬೇಕಿದೆ. ಇದು ಆರ್‌ಆರ್‌ಬಿ-ಎನ್‌ಟಿಪಿಸಿಯು ಮೊದಲ ಹಂತದಲ್ಲಿ ಉತ್ತೀರ್ಣರಾದವರಿಗೆ ಎಸಗಿರುವ ವಂಚನೆ ಎಂದು ಆರೋಪಿಸಿದ್ದಾರೆ. 2019ರಲ್ಲಿ ಹೊರಡಿಸಲಾದ ಆರ್‌ಆರ್‌ಬಿ ಅಧಿಸೂಚನೆಯಲ್ಲಿ ಒಂದೇ ಪರೀಕ್ಷೆಯನ್ನು ಉಲ್ಲೇಖಿಸಲಾಗಿತ್ತು. ಆದರೆ ಇದೀಗ ಸರ್ಕಾರವು ತಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಉದ್ಯೋಗಾಕಾಂಕ್ಷಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಮಾತನಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ಉದ್ಯೋಗಾಕಾಂಕ್ಷಿಗಳಲ್ಲಿ ವಿನಂತಿಸಿಸಿದ್ದಾರೆ. ಪ್ರತಿಭಟನಾನಿರತರ ಮನವಿ ಹಾಗೂ ಮತ್ತು ವ್ಯಕ್ತವಾಗಿರುವ ಆತಂಕವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲಾಗುವುದು.

ಸಮಿತಿಯು ಅಭ್ಯರ್ಥಿಗಳ ಪ್ರಾತಿನಿಧ್ಯತೆ ಬಗ್ಗೆ ಪರಿಶೀಲಿಸಲಿದ್ದು, ಮುಖ್ಯಮಂತ್ರಿಗಳು ಸೂಕ್ಷ್ಮವಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಅವರೊಂದಿಗೆ ಸಂಪರ್ಕದಲ್ಲಿದ್ದು, ಅಭ್ಯರ್ಥಿಗಳು ಔಪಚಾರಿಕವಾಗಿ ಕುಂದುಕೊರತೆಗಳನ್ನು ಮುಂದಿಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಡ್ರಗ್​​ ದಂಧೆ ಪ್ರಕರಣ: ಮಹಿಳೆ ಸೇರಿ ಮತ್ತೆ ಮೂವರ ಸೆರೆ

ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ

ಮೊಸರಿನ ಜೊತೆ ಒಣದ್ರಾಕ್ಷಿ ಸೇವಿಸಿದರೆ ಏನಾಗುತ್ತೆ ಗೊತ್ತಾ?

ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿರುವ ಜಡ್ಜ್ ವಜಾಕ್ಕೆ ಶಾಸಕ ಕೆ.ಶಿವನಗೌಡ ಒತ್ತಾಯ

ಕಳ್ಳಭಟ್ಟಿ ಸೇವಿಸಿ ಮತ್ತೆ ಐವರು ಸಾವು: ಮುಂದುವರಿದ ಸಾವಿನ ಸರಣಿ

 

ಇತ್ತೀಚಿನ ಸುದ್ದಿ