ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಕಾಲ ಕಳೆಯುತ್ತಿದೆ: ಪ್ರಿಯಾಂಕ ಖರ್ಗೆ
ಕಲಬುರಗಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯದ ಬಗ್ಗೆ ಅಲರ್ಜಿ, ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಅಲರ್ಜಿ. ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನವನ್ನ ದುರ್ಬಲಗೊಳಿಸಲು ಸರ್ಕಾರ ಯತ್ನಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರ ಬಂದಾಗಿನಿಂದ ಈ ಭಾಗದ ಯೋಜನೆಗಳು ಮಾಯವಾಗಿವೆ. ರೈತರಿಗೆ ಇದುವರೆಗೂ ಯಾವುದೇ ರೀತಿಯ ಪರಿಹಾರ ದೊರೆತಿಲ್ಲಕಾನೂನು ಸುವ್ಯವಸ್ಥೆ ಅಂತು ಸಂಪೂರ್ಣ ಹದಗೆಟ್ಟಿ ಹೋಗಿದೆ ಎಂದರು.
ಬಿಜೆಪಿಯವರಿಗೆ ಹಳೇ ಆಟ ಆಡಿ ಬೇಜಾರಾಗಿದೆ.
ಇದೀಗ ಹೊಸ ಆಟ ಶುರು ಮಾಡಿಕೊಂಡಿದ್ದಾರೆ. 50 ವರ್ಷದಲ್ಲಿ ಉಂಟಾಗದ ನಿರುದ್ಯೋಗ ಇಂದಿನ ಸರ್ಕಾರದಲ್ಲಿ ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಉದ್ಯೋಗ ಕಲ್ಪಿಸುವ ಯೋಜನೆಗಳು ಬಂದಿಲ್ಲ. ಕದ್ದಿಮುಚ್ಚಿ ಈ ಭಾಗದ ಯುವಕರ ಉದ್ಯೋಗ ಭವಿಷ್ಯ ಕತ್ತಲೆಗೆ ಒಯ್ಯುತ್ತಿದ್ದಾರೆ ಎಂದು ಆರೋಪಿಸಿದರು.
ಕೊರೊನಾದಿಂದ ಆರ್ಥಿಕ ನಷ್ಟ ನೆಪವೊಡ್ಡಿ ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ಭರ್ತಿಗೆ ತಡೆ ನೀಡಿದೆ. ಕೇವಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ? ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಈ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. 371(ಜೆ) ಮಾನದಂಡಗಳನ್ನು ನೇಮಕಾತಿಯಲ್ಲಿ ಸರಿಯಾಗಿ ಅನುಸರಿಸುತ್ತಿಲ್ಲ. 45 ಪಿಎಸ್ಐ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಸರ್ಕಾರದ ಅವಿವೇಕಿತನದಿಂದ ನಮ್ಮ ಭಾಗದ ಜನರಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾ ಮಹಿಳೆಯ ಬಂಧನ
ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ
ವಾಟ್ಸಾಪ್ ಗ್ರೂಪ್ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ
ಅನ್ಯಜಾತಿ ಹುಡುಗಿಯೊಂದಿಗೆ ಮದುವೆ: ಲೈಟ್ ಕಂಬಕ್ಕೆ ಕಟ್ಟಿ ಹುಡುಗನ ತಾಯಿ ಮೇಲೆ ಹಲ್ಲ