ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ - Mahanayaka
1:02 PM Thursday 12 - December 2024

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

soundarya
28/01/2022

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಅವರು ನೇಣು ಬಿಗಿದುಕೊಂಡು ಇಂದು ಬೆಂಗಳೂರಿನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿವೆ ಎಂದು ತಿಳಿದುಬಂದಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಲ್ಲಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಮೃತ ಸೌಂದರ್ಯ ಗರ್ಭಿಣಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ. 2018ರಲ್ಲಿ ಮದುವೆಯಾಗಿದ್ದ ಸೌಂದರ್ಯ ನಗರದ ಎಂ.ಎಸ್ .ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು, ಅವರಿಗೆ ಈಗಾಗಲೇ 9 ತಿಂಗಳ ಮಗುವಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು

ದೇಶದಲ್ಲಿ ಬುರ್ಖಾ ನಿಷೇಧಿಸಬೇಕು:ವಿವಾದಾತ್ಮಕ ಸ್ವಾಮೀಜಿ ರಿಷಿ ಕುಮಾರ್​

ಶೇಂದಿ ತೆಗೆಯುತ್ತಿದ್ದಾಗ ತಾಳೆ ಮರದಿಂದ ಬಿದ್ದು ವ್ಯಕ್ತಿ ಸಾವು

ಅಂಬೇಡ್ಕರ್ ಗೆ ಅವಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎನ್.ಮಹೇಶ್ ಆಕ್ರೋಶ

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ

 

ಇತ್ತೀಚಿನ ಸುದ್ದಿ