ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯ
ಸುಳ್ಯ: ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವ ಚಿತ್ರವನ್ನು ತೆಗೆಸಿ ಅವಮಾನಿಸಿದ್ದು, ಅವರನ್ನು ಕೂಡಲೇ ಅಮಾನತು ಮಾಡಿ, ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯಿಸಿದೆ.
ರಾಷ್ಟ್ರ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನ ಇದಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಗೆ ಇದೊಂದು ಕಪ್ಪು ಚುಕ್ಕೆಯಾಗಿದೆ. ತಕ್ಷಣವೇ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕಠಿಣ ಕ್ರಮವನ್ನು ಜರಗಿಸಬೇಕು ಎಂದು ಸಮಿತಿ ಒತ್ತಾಯಿಸಿತು.
ಈ ಸಂಬಂಧ ಸುಳ್ಯ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಪಲ್ಲತ್ತಡ್ಕ, ಸುಳ್ಯ ತಾಲೂಕು ಸಂಘಟನೆಯ ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ಕಾರ್ಯದರ್ಶಿಗಳಾದ ಬಾಲಕೃಷ್ಣ ದೊಡ್ಡೇರಿ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಗುಚಿ ಬಿದ್ದ 10 ಜನರು ಪ್ರಯಾಣಿಸುತ್ತಿದ್ದ ದೋಣಿ: ಇಬ್ಬರು ನೀರುಪಾಲು
ಆತಂಕಕಾರಿ ಸುದ್ದಿ: ಆಹಾರಕ್ಕಾಗಿ ಕಿಡ್ನಿಯನ್ನು ಮಾರಾಟ ಮಾಡುತ್ತಿರುವ ಅಫ್ಘಾನ್ನರು