ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕೆಲ ಕೇಂದ್ರ ಸಚಿವರು
ನವದೆಹಲಿ: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು. ಈ ವೇಳೆ ಕೇಂದ್ರ ಸಚಿವರು, ಸಂಸದರು ಕೋವಿಡ್ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ.
ಮೊದಲ ಸಾಲುಗಳಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಪ್ರಮುಖ ಸಚಿವರು ಮತ್ತು ವಿವಿಧ ಪಕ್ಷಗಳ ನಾಯಕರು ದೈಹಿಕ ಅಂತರ ಕಾಪಾಡಿಕೊಂಡಿದ್ದರು. ಆದರೆ ನಂತರದ ಸಾಲುಗಳಲ್ಲಿ ಕುಳಿತಿದ್ದ ಸಂಸದರು ಅಂತರವನ್ನು ಗಾಳಿಗೆ ತೂರಿದ್ದು ಕಂಡುಬಂದಿದೆ.
ಅನೇಕ ಸಂಸದರು ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಇದರಲ್ಲಿ ಹಲವು ಕೇಂದ್ರ ಸಚಿವರೂ ಸೇರಿದ್ದು, ಐದು ಮಂದಿ ಕುಳಿತುಕೊಳ್ಳುವ ಬೇಂಚ್‌ಗಳಲ್ಲಿ ಏಳು ಸಂಸದರು ಒಟ್ಟಿಗೆ ಕುಳಿತಿದ್ದರು. ಕೆಲವರು ಮಾಸ್ಕ್‌ಗಳನ್ನು ಧರಿಸದೇ ಮಾತನಾಡುತ್ತಿರುವುದು ಕಂಡು ಬಂದಿದೆ.ಸಂಸತ್ತಿನ ಬಜೆಟ್ ಅಧಿವೇಶದ ಮೊದಲ ಹಂತದಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪ ಪಾಳಿ ಪದ್ದತಿಯಲ್ಲಿ ನಡೆಯಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ: 6 ಮಂದಿ ಸಾವು
ಕಾರು ಅಡ್ಡಗಟ್ಟಿ ಕಾನ್ ಸ್ಟೆಬಲ್ ಮೇಲೆ ಹಲ್ಲೆ, ಕೊಲೆ ಬೆದರಿಕೆ
ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ: ಬಿಜೆಪಿ ಕಾರ್ಯಕರ್ತರಿಂದ ಪಕ್ಷದ ಕಚೇರಿ ಲೂಟಿ
ನಾಳೆ ಖಾಸಗೀಕರಣ ನೀತಿ ವಿರೋಧಿಸಿ ವಿದ್ಯುತ್ ನೌಕರರು ದೇಶವ್ಯಾಪಿ ಪ್ರತಿಭಟನೆ
ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೂಕುಸಿತಕ್ಕೆ ಕನಿಷ್ಠ 18 ಸಾವು