ಬಿಜೆಪಿ ಕಚೇರಿಯಲ್ಲೇ ಬಡಿದಾಡಿಕೊಂಡು ಕಾರ್ಯಕರ್ತರು: ಮಾಜಿ ಶಾಸಕ ಸುರೇಶ್ ಗೌಡರ ಬೆಂಬಲಿಗನ ವಿರುದ್ಧ ದೂರು
ತುಮಕೂರು: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಕರ್ತನ ಮೇಲೆ ಮಾಜಿ ಜಿಲ್ಲಾಧ್ಯಕ್ಷ ಬಿ.ಸುರೇಶ್ಗೌಡರ ಬೆಂಬಲಿಗನೊಬ್ಬ ತೀವ್ರ ಹಲ್ಲೆ ನಡೆಸಿರುವ ಪ್ರಕರಣ ಹೊಸ ಬಡಾವಣೆ ಠಾಣೆ ಮೆಟ್ಟಿಲೇರಿದೆ.
ಮಂಗಳವಾರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದ ಸಂದರ್ಭದಲ್ಲಿಯೇ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ.
ಕ್ಯಾತಸಂದ್ರದ ಬಿಜೆಪಿ ಕಾರ್ಯಕರ್ತ ಕಾಂತರಾಜು, ಸಾಮಾಜಿಕ ಜಾಲತಾಣದ ಪ್ರಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಭಾಗದ ಸಂಚಾಲಕ ವಿನಯ ಅದ್ವೈತ್ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭೇಟಿಯಾಗಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ಗೌಡ ಅವರ ಹೆಸರನ್ನು ಸಾಮಾಜಿಕ ಜಾಲತಾಣದ ಪ್ರಚಾರದಲ್ಲಿ ಬಳಸಿಲ್ಲ ಎಂಬ ಕಾರಣಕ್ಕೆ ಅದ್ವೈತ್ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಬಿಜೆಪಿ ಯುವ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿಯೇ ಬಡಿದಾಡಿಕೊಂಡು ಠಾಣೆಯಲ್ಲಿ ದೂರು ದಾಖಲಿಸಿರುವುದು ಪಕ್ಷದ ಮುಖಂಡರ ನಡುವೆಯೇ ಮುಸುಕಿನ ಗುದ್ದಾಟಕ್ಕೂ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎರಡು ತಂಡಗಳ ನಡುವೆ ಗಲಾಟೆ: ಮಾರಾಕಾಸ್ತ್ರದೊಂದಿಗೆ ಬಂದ ಯುವಕ
ಫೆ.7ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು
ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ
ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು