ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ - Mahanayaka
9:14 PM Wednesday 5 - February 2025

ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

cm basavaraj bommai
02/02/2022

ಬೆಂಗಳೂರು: ಫೆ. 7ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ.

ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುತ್ತೇನೆ. ನಾಳೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ. ಆದರೆ ಸಂಸದರ ಸಲಹೆ ಮೇರೆಗೆ ಸೋಮವಾರ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

ರಾಜ್ಯ ಸರ್ಕಾರ ಮಲಗಿ ಬಿಟ್ಟಿದೆ: ಮಾಜಿ ಸಚಿವ ಸಂತೋಷ್ ಲಾಡ್

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ

ಪೊಲೀಸ್ ವಾಹನ ಕಳವು: ಆರೋಪಿಯ ಬಂಧನ

 

ಇತ್ತೀಚಿನ ಸುದ್ದಿ